ಮೋದಿ ಸರ್ಕಾರದ ವಿರುದ್ಧ ಮತ್ತೆ ಒಂದಾದ ವಿಪಕ್ಷಗಳು, ದೀದಿ ಪ್ರತಿಭಟನೆಗೆ ದೆಹಲಿಯಲ್ಲಿ ವೇದಿಕೆ ಸಜ್ಜು
ಇತ್ತೀಚೆಗಷ್ಟೇ ಕೋಲ್ಕತ್ತಾದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಕುಳಿತಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಇದೀಗ ದೆಹಲಿಯಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

Published On :
ನವದೆಹಲಿ: ಇತ್ತೀಚೆಗಷ್ಟೇ ಕೋಲ್ಕತ್ತಾದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಕುಳಿತಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಇದೀಗ ದೆಹಲಿಯಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಹೌದು ಮತ್ತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಮತಾ ಬ್ಯಾನರ್ಜಿ ಅವರು ದೆಹಲಿಯಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದು, ಇಂದು ಜಂತರ್ ಮಂತರ್ ನಲ್ಲಿ ಬೃಹತ್ ಸಮಾವೇಶ ಆಯೋಜಿಸಿದ್ದಾರೆ. ಬೃಹತ್ ಸಮಾವೇಶಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಉತ್ತರ ಪ್ರದೇಶ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಸೇರಿದಂತೆ ಎಲ್ಲಾ ವಿಪಕ್ಷದ ನಾಯಕರು ಆಗಮಿಸಲಿದ್ದಾರೆ. ಅಲ್ಲದೇ ಈ ಬಾರಿ ಸಮಾವೇಶದ ಬೃಹತ್ ರ‍್ಯಾಲಿಯನ್ನು ಸಿಎಂ ಅರವಿಂದ್ ಕೇಜ್ರಿವಾಲ್ ಉದ್ಘಾಟಿಸಲಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಈ ಹಿಂದೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಸಿಎಂ ಮಮತಾ ಬ್ಯಾನರ್ಜಿ ಅವರು, 'ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ ದೇಶವನ್ನು ರಕ್ಷಿಸಲು ಈ ಸಮಾವೇಶ ನಡೆಸುತ್ತಿದ್ದೇವೆ. ಸಂಯುಕ್ತ ಭಾರತ ಕಟ್ಟಲು ಮೈತ್ರಿಕೂಟ ಅತ್ಯಗತ್ಯ. ಕೇಂದ್ರ ಸರ್ಕಾರದ ವಿರುದ್ಧ ಇಲ್ಲಿ ಕಾಂಗ್ರೆಸ್ ಸೇರಿದಂತೆ ಪ್ರಾದೇಶಿಕ ಪಕ್ಷಗಳ ಶಕ್ತಿ ಪ್ರದರ್ಶನ ಮಾಡುತ್ತೇವೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ ಎಲ್ಲದಕ್ಕೂ ಸಿದ್ದವಾಗಿದ್ದೇವೆ. ಈ ಬಾರಿ ಮೋದಿಯವರನ್ನು ಸೋಲಿಸಲು ಪಣತೊಟ್ಟಿದ್ದೇವೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew Delhiಪಶ್ಚಿಮ ಬಂಗಾಳWest BengalMamata Banerjeeಮಮತಾ ಬ್ಯಾನರ್ಜಿಲೋಕಸಭಾ ಚುನಾವಣೆ 2019Loksabha Election 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


