ಉಗ್ರರ ದಾಳಿಯಲ್ಲಿ ಸಿಆರ್‌ಪಿಎಫ್ ಯೋಧರು ಹುತಾತ್ಮ: ರಾಹುಲ್ ಸಂತಾಪ
ಜಮ್ಮು-ಕಾಶ್ಮೀರದಲ್ಲಿ ಉಗ್ರರದ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧರ ಸಾವಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಉಗ್ರರದ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧರ ಸಾವಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
‘ಜಮ್ಮು-ಕಾಶ್ಮೀರದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆ ಮೇಲೆ ನಡೆದ ಪೈಶಾಚಿಕ ಘಟನೆಯಲ್ಲಿ 20 ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿರುವ ಘಟನೆ ಕುರಿತು ತಮಗೆ ತೀವ್ರ ಆಘಾತವಾಗಿದೆ. ಹುತಾತ್ಮರ ಕುಟುಂಬಗಳಿಗೆ ತಾವು ಸಾಂತ್ವನ ತಿಳಿಸುತ್ತಿದ್ದು, ಗಾಯಗೊಂಡ ಯೋಧರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ’ ಎಂದು ರಾಹುಲ್ ಗಾಂಧಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.
ಸಿಆರ್‌ಪಿಎಫ್ ಬೆಂಗಾವಲು ಪಡೆ ಮೇಲೆ ನಡೆದ ದಾಳಿ ಕುರಿತು ಎಐಸಿಸಿ ಮಾಧ್ಯಮ ಉಸ್ತುವಾರಿ ರಂದೀಪ್ ಸುರ್ಜೆವಾಲ ಸಹ ತೀವ್ರವಾಗಿ ಖಂಡಿಸಿದ್ದಾರೆ.
ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ಪೈಶಾಚಿಕ ದಾಳಿ ಖಂಡನೀಯ. ಮಹೋನ್ನತ ತ್ಯಾಗ ಮಾಡಿದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದ್ದು, ಹುತಾತ್ಮರ ಕುಟುಂಬಗಳಿಗೆ ಸಾಂತ್ವನ ತಲುಪಿಸುತ್ತಿರುವುದಾಗಿ ಅವರು ಹೇಳಿದ್ದಾರೆ. ಉರಿ, ಪಠಾಣ್‌ಕೋಟ್ ಮತ್ತು ಪುಲ್ವಾಮ ಉಗ್ರರ ಪಟ್ಟಿಯಲ್ಲಿದ್ದು, ರಾಷ್ಟ್ರೀಯ ಭದ್ರತೆಯಲ್ಲಿ ನರೇಂದ್ರಮೋದಿ ಸರ್ಕಾರ ರಾಜಿಯಾಗುವುದನ್ನು ಮುಂದುವರೆಸುತ್ತಿದೆ ಎಂದು ಸುರ್ಜೆವಾಲ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


