ದೇಶ

ಮತ್ತೊಬ್ಬ ಮಗನನ್ನೂ ಭಾರತಾಂಬೆಯ ಸೇವೆಗೆ ತ್ಯಾಗ ಮಾಡಲು ಸಿದ್ದ: ಹುತಾತ್ಮ ಯೋಧನ ತಂದೆ

ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ...

ಮತ್ತೊಬ್ಬ ಮಗನನ್ನೂ ಭಾರತಾಂಬೆಯ ಸೇವೆಗೆ ತ್ಯಾಗ ಮಾಡಲು ಸಿದ್ದ: ಹುತಾತ್ಮ ಯೋಧನ ತಂದೆ
ಹುತಾತ್ಮ ಯೋಧ ರತನ್ ಠಾಕೂರ್ ತಂದೆ
Published On :
ನವದೆಹಲಿ: ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ.
ನಾನು ಒಬ್ಬ ಮಗನನ್ನು ಕಳೆದುಕೊಂಡಿದ್ದೇನೆ, ನನಗೆ ಇನ್ನೊಬ್ಬ ಮಗನಿದ್ದು ಆತನನ್ನು ಭಾರತ ಮಾತೆಯ ಸೇವೆಗಾಗಿ ಮುಡಿಪಿಡುವೆ, ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಬಿಹಾರ ಮೂಲದ ಹುತಾತ್ಮ ಯೋಧ ರತನ್ ಠಾಕೂರ್ ತಂದೆ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ ಬಸ್ ಅನ್ನು ಗುರಿಯಾಗಿಸಿಕೊಂಡು ಐಇಡಿ ಸ್ಫೋಟಿಸಿದ್ದು, ಕನಿಷ್ಠ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದರು,
ಐಇಡಿ ಸ್ಫೋಟದಲ್ಲಿ ಹಲವು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಾಕಿಸ್ತಾನ ಮೂಲದ ಜೈಷ್ ಇ ಮೊಹಮ್ಮದ್‌ ಉಗ್ರ ಸಂಘಟನೆ ಈ ಕೃತ್ಯದ ಹೊಣೆ ಹೊತ್ತುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.