ದೇಶ

ಕಪ್ಪು ಪಟ್ಟಿಗೆ ಪಾಕಿಸ್ತಾನ: ಭಾರತದಿಂದ ಎಫ್ಎಟಿಎಫ್ ಗೆ ದಾಖಲೆ

ಉಗ್ರರಿಗೆ ಹಣಕಾಸಿನ ನೆರವು ನೀಡುವ ತನ್ನ ಚಾಳಿಯನ್ನು ಮುಂದುವರೆಸಿರುವ ಪಾಕಿಸ್ತಾನವನ್ನು ಉಗ್ರರಿಗೆ ಹಣಕಾಸಿನ ನೆರವು ನೀಡುತ್ತಿರುವ ರಾಷ್ಟ್ರಗಳ ಕಪ್ಪು ಪಟ್ಟಿಗೆ...

ಕಪ್ಪು ಪಟ್ಟಿಗೆ ಪಾಕಿಸ್ತಾನ: ಭಾರತದಿಂದ ಎಫ್ಎಟಿಎಫ್ ಗೆ ದಾಖಲೆ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಉಗ್ರರಿಗೆ ಹಣಕಾಸಿನ ನೆರವು ನೀಡುವ ತನ್ನ ಚಾಳಿಯನ್ನು ಮುಂದುವರೆಸಿರುವ ಪಾಕಿಸ್ತಾನವನ್ನು ಉಗ್ರರಿಗೆ ಹಣಕಾಸಿನ ನೆರವು ನೀಡುತ್ತಿರುವ ರಾಷ್ಟ್ರಗಳ ಕಪ್ಪು ಪಟ್ಟಿಗೆ ಸೇರಿಸುವಂತೆ ಭಾರತ ಅಂತರರಾಷ್ಟೀಯ ಭಯೋತ್ಪಾದನಾ ಆರ್ಥಿಕ ಚಟುವಟಿಕೆಗಳ ಮೇಲೆ ನಿಗಾ ವಹಿಸುವ ಹಣಕಾಸು ಕಾರ್ಯಪಡೆ(ಎಫ್ ಎಟಿಎಫ್)ಗೆ ದಾಖಲೆ ನೀಡಲಿದೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರ ಕೃತ್ಯಗಳಲ್ಲಿ ಪಾಕಿಸ್ತಾನದ ಪಾತ್ರ ಬಯಲು ಮಾಡುವುದು ಹಾಗೂ ಅದನ್ನು ಕಪ್ಪು ಪಟ್ಟಿಗೆ ಸೇರಿಸುವುದು ಈ ಸಾಕ್ಷ್ಯಾಧಾರಗಳನ್ನು ಒದಗಿಸುವ ಹಿಂದಿನ ಉದ್ದೇಶವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಪಾಕಿಸ್ತಾನ ಮೂಲದ ಜೈಶ್-ಇ-ಮೊಹ್ಮದ್ ಉಗ್ರ ಸಂಘಟನೆ ಈ ಕೃತ್ಯ ಎಸಗಿದೆ ಎಂಬುದಕ್ಕೆ ತನಿಖಾ ಸಂಸ್ಥೆಗಳು ಸಾಕ್ಷ್ಯ ಹಾಗೂ ಕಡತಗಳನ್ನು ಸಿದ್ಧಪಡಿಸಿವೆ. ಇದರ ಜತೆಗೆ ಪಾಕಿಸ್ತಾನದ ತನಿಖಾ ಸಂಸ್ಥೆಗಳ ಜತೆ ಜೈಶ್-ಇ-ಮೊಹ್ಮದ್ ಸಂಘಟನೆ ನಂಟು ಇರುವುದನ್ನು ಕೂಡ ಬಯಲು ಮಾಡಲಿದೆ. 
ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು ಹೇಗೆ ದೊರೆಯಿತು ಎಂಬ ಮಾಹಿತಿ ಕೂಡ ಇದೆ ಎಂದು ತನಿಖಾ ಸಂಸ್ಥೆಯ ಅಧಿಕಾರಿಗಳು ಹೇಳಿದ್ದಾರೆ. ಅಲ್ಲದೆ ಈ ಹಿಂದೆ ಜೈಶ್-ಇ-ಮೊಹ್ಮದ್ ನಡೆಸಿದ ದಾಳಿಗಳ ಮಾಹಿತಿ ಸಹ ಈ ದಾಖಲೆಯಲ್ಲಿ ಇರಲಿದೆ ಎಂದಿದ್ದಾರೆ.
ಪ್ಯಾರಿಸ್ ನಲ್ಲಿ ಇರುವ ಎಫ್ಎಟಿಎಫ್ ಈ ದಾಖಲೆಗಳನ್ನು ನೀಡುವ ಮೂಲಕ, ಪಾಕಿಸ್ತಾನಿ ಸಂಸ್ಥೆಗಳು ಜೈಶ್-ಇ-ಮೊಹ್ಮದ್ ಗೆ  ಹೇಗೆ ಹಣಕಾಸಿನ ನೆರವು ಒದಗಿಸುತ್ತಿವೆ ಎಂಬುದನ್ನು ತಿಳಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.