ಐಎಸ್ಐ ಜತೆ ನಂಟು: ಕಾಶ್ಮೀರಿ ಪ್ರತ್ಯೇಕವಾದಿಗಳ ಭದ್ರತೆ ಹಿಂಪಡೆಯಲು ಮುಂದಾದ ಸರ್ಕಾರ
ಕಾಶ್ಮೀರದ ಪ್ರತ್ಯೇಕವಾದಿಗಳು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಜೊತೆ ನಂಟು ಹೊಂದಿರುವ ಶಂಕೆ ವ್ಯಕ್ತವಾಗಿದ್ದು, ಅವರಿಗೆ ನೀಡಿದ್ದ ಭದ್ರತೆಯನ್ನು...

Published On :
ಶ್ರೀನಗರ: ಕಾಶ್ಮೀರದ ಪ್ರತ್ಯೇಕವಾದಿಗಳು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಜೊತೆ ನಂಟು ಹೊಂದಿರುವ ಶಂಕೆ ವ್ಯಕ್ತವಾಗಿದ್ದು, ಅವರಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆಯಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಮುಂದಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಸೂಚನೆಯಂತೆ ಕಾಶ್ಮೀರ ಗೃಹ ಕಾರ್ಯದರ್ಶಿಗಳು ಪ್ರತ್ಯೇಕವಾದಿಗಳ ಭದ್ರತೆಯನ್ನು ಪರೀಶಿಲಿಸುತ್ತಿದ್ದು, ಐಎಸ್ ಐ ಜೊತೆಗಿನ ನಂಟು ಪರಿಶೀಲಿಸಿದ ಬಳಿಕ ಭದ್ರತೆ ಹಿಂಪಡೆಯಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ನಿನ್ನೆಯಷ್ಟೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಕಾಶ್ಮೀರ ಪ್ರತ್ಯೇಕವಾದಿಗಳು ಐಎಸ್ ಐ ಜತೆ ನಂಟು ಹೊಂದಿರುವ ಸಾಧ್ಯತೆ ಇದ್ದು, ಅವರಿಗೆ ನೀಡಿದ ಭದ್ರತೆಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು. ಅಲ್ಲದೆ ಪಾಕ್ ನಿಂದ ಹಣಪಡೆದುಕೊಳ್ಳುತ್ತಿರುವ ವ್ಯಕ್ತಿಗಳಿಂದ ಜಮ್ಮು-ಕಾಶ್ಮೀರದಲ್ಲಿ ಅಶಾಂತಿಗೆ ಕಾರಣವಾಗುತ್ತಿದ್ದು, ಇಂತಹವರಿಗೆ ಕಲ್ಪಿಸಲಾಗುತ್ತಿರುವ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಲಾಗುವುದು ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜಮ್ಮು ಮತ್ತು ಕಾಶ್ಮೀರJammu and Kashmirseparatistsಪ್ರತ್ಯೇಕವಾದಿಗಳುಗೃಹ ಕಾರ್ಯದರ್ಶಿPulwama Terror AttackHome Secy
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


