ಅಕ್ರಮ ಆಸ್ತಿ ಪ್ರಕರಣ: ಮಾರ್ಚ್ 2ರವರೆಗೆ ರಾಬರ್ಟ್ ವಾದ್ರಾ ಬಂಧನವಿಲ್ಲ
ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣ ಸಂಬಂಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ .....

Published On :
ನವದೆಹಲಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣ ಸಂಬಂಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಬಂಧನದ ವಿರುದ್ಧ ರಕ್ಷಣೆಯನ್ನು ದೆಹಲಿ ಕೋರ್ಟ್ ಮಾರ್ಚ್ 2ರವರೆಗೆ ವಿಸ್ತರಿಸಿದೆ.
ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೋದರ ಸಂಬಂಧಿ ವಾದ್ರಾ ಅವರಿಗೆ ಈ ಮಧ್ಯಂತರ ಪರಿಹಾರವನ್ನು ಒದಗಿಸಿದ್ದಾರೆ.
ಈ ಪ್ರಕರಣದಲ್ಲಿ ವದ್ರಾ ಅವರನ್ನು ಪ್ರಶ್ನಿಸುವ ಅಗತ್ಯವಿದೆ ಎಂದು ಇಡಿ ಪರ ವಕೀಲ ನಿತೀಶ್ ರಾಣಾ ಕೋರ್ಟ್ ಗೆ ತಿಳಿಸಿದ್ದಾರೆ. ಅಲ್ಲದೆ ವಾದ್ರಾ ವಿಚಾರಣೆಗೆ ಸಹಕರಿಸದ ಕಾರಣ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಬೇಕು ಎಂದೂ ಅವರು ಕೋರಿದ್ದಾರೆ. ಆದರೆ ವಾದ್ರಾ ಇಡಿ ವಾದವನ್ನು ಅಲ್ಲಗೆಳೆದಿದ್ದು "ನಾನು ಇಡಿ ಅಧಿಕಾರಿಗಳು ಕರೆ ಮಾಡಿದಾಗಲೆಲ್ಲ ವಿಚಾರಣೆಗೆ ಹಾಜರಾಗಿದ್ದೇನೆ" ಎಂದಿದ್ದಾರೆ.
ಫೆ. 2ರಂಂದು ನ್ಯಾಯಾಲಯವು ವಾದ್ರಾಗೆ ಫೆ.16ರ ತನಕ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಅಲ್ಲದೆ ಇಡಿ ಅಧಿಕಾರಿಗಳೊಡನೆ ಪ್ರಕರಣದ ವಿಚಾರಣೆಗೆ ಸಹಕರಿಸಬೇಕು ಎಂದೂ ಹೇಳಿದೆ.
ವಾದ್ರಾ ಅವರು ಲಂಡನ್ ನಲ್ಲಿ ಹೊಂದಿರುವ ಆಸ್ತಿ ಹಾಗೂ ಅದರ ವ್ಯವಹಾರದಲ್ಲಿ ಆಗಿದೆ ಎನ್ನಲಾಗಿರ್ಯ್ವ ಅಕ್ರಮ ಹಣ ವರ್ಗಾವಣೆ ಕುರಿತು ಈ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Enforcement Directorateಜಾರಿ ನಿರ್ದೇಶನಾಲಯRobert Vadraರಾಬರ್ಟ್ ವಾದ್ರinterim protection from arrestಬಂಧನದಿಂದ ಮಧ್ಯಂತರ ರಕ್ಷಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


