ದೇಶ

ಪುಲ್ವಾಮಾ ದಾಳಿ ಬಳಿಕ ಪಾಕ್ ಗಡಿಯಲ್ಲಿ ಭಾರತೀಯ ವಾಯುಸೇನೆಯಿಂದ ಶಕ್ತಿ ಪ್ರದರ್ಶನ; ಪಾಕಿಸ್ತಾನ ಗಡಗಡ!

ಕಣಿವೆ ರಾಜ್ಯದಲ್ಲಿ ಭಯೋತ್ಪಾದಕರು ರಕ್ತದೊಕುಳಿ ಹರಿಸಿದ್ದು 40ಕ್ಕೂ ಹೆಚ್ಚು ಭಾರತೀಯ ಯೋಧರನ್ನು ಬಲಿ ಪಡೆದಿದ್ದಾರೆ. ಇಡೀ ದೇಶದಲ್ಲಿ ಪಾಕ್ ಮತ್ತು ಭಯೋತ್ಪಾದನೆ...

ಪುಲ್ವಾಮಾ ದಾಳಿ ಬಳಿಕ ಪಾಕ್ ಗಡಿಯಲ್ಲಿ ಭಾರತೀಯ ವಾಯುಸೇನೆಯಿಂದ ಶಕ್ತಿ ಪ್ರದರ್ಶನ; ಪಾಕಿಸ್ತಾನ ಗಡಗಡ!
ಸಂಗ್ರಹ ಚಿತ್ರ
Published On :
ಫೋಕ್ರಾನ್: ಕಣಿವೆ ರಾಜ್ಯದಲ್ಲಿ ಭಯೋತ್ಪಾದಕರು ರಕ್ತದೊಕುಳಿ ಹರಿಸಿದ್ದು 40ಕ್ಕೂ ಹೆಚ್ಚು ಭಾರತೀಯ ಯೋಧರನ್ನು ಬಲಿ ಪಡೆದಿದ್ದಾರೆ. ಇಡೀ ದೇಶದಲ್ಲಿ ಪಾಕ್ ಮತ್ತು ಭಯೋತ್ಪಾದನೆ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದೆ. ಈ ಮಧ್ಯೆ ಪೋಕ್ರಾನ್ ವಾಯುನೆಲೆಯಲ್ಲಿ ಭಾರತದ ವಾಯುಸೇನೆ ಶಕ್ತಿ ಪ್ರದರ್ಶನ ಆರಂಭಿಸಿದೆ. 
ಪುಲ್ವಾಮಾ ಉಗ್ರರ ದಾಳಿ ಬಳಿಕ ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದರು. ಇದೀಗ ಪಾಕ್ ಗಡಿಭಾಗದಲ್ಲಿ ಸೇನೆ ತನ್ನ ಶಕ್ತಿ ಪ್ರದರ್ಶನ ಆರಂಭಿಸಿದೆ. ತೇಜಸ್, ಅಡ್ವಾನ್ಸಡ್ ಲೈಟ್ ಹೆಲಿಕಾಫ್ಟರ್, ಆಕಾಶ್ ವಿಮಾನಗಳು ಹಾರಾಟ ನಡೆಸಿವೆ.
ಪೋಕ್ರಾನ್ ನಲ್ಲಿ ವಾಯು ಶಕ್ತಿ ಪ್ರದರ್ಶನ ನಡೆಯುತ್ತಿದ್ದು ಜೆಟ್ ವಿಮಾನಗಳು, ಮಿಗ್-29, ಮಿಗ್-27, ಎಎನ್-32 ಸೇರಿದಂತೆ ವಿವಿಧ ವಿಮಾನಗಳು ಪ್ರದರ್ಶನ ನೀಡುತ್ತಿವೆ. ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಸಹ ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.