ಮೋದಿ ಮತ್ತೆ ಪ್ರಧಾನಿಯಾದರೆ ದೇಶದ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳು ನಾಶ- ಯೆಚೂರಿ
ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ ದೇಶದಲ್ಲಿನ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳು ನಾಶ ಹೊಂದಲಿವೆ ಎಂದು ಸಿಪಿಐ-ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಹೇಳಿದ್ದಾರೆ.

ಕೇರಳ: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ ದೇಶದಲ್ಲಿನ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳು ನಾಶ ಹೊಂದಲಿವೆ ಎಂದು ಸಿಪಿಐ-ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಹೇಳಿದ್ದಾರೆ.
ಕೇಂದ್ರ ಸರ್ಕಾರದ ವೈಫಲ್ಯ ವಿರೋಧಿಸಿ ಉತ್ತರ ಕೇರಳ ವಲಯದಲ್ಲಿ ಕೇರಳ ಸಂರಕ್ಷಣಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಯೆಚೂರಿ, ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಸಾಂವಿಧಾನಿಕ ಸಂಸ್ಥೆಗಳು ನಾಶ ಹೊಂದಲಿದ್ದು, ಸಮಾಜದಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ದೊಡ್ಡ ಕಂದಕ ನಿರ್ಮಾಣವಾಗಲಿದೆ ಎಂದರು.
ಪುಲ್ವಾಮಾ ದಾಳಿ ಕುರಿತು ಮಾತನಾಡಿದ ಯೆಚೂರಿ, ಇದೊಂದು ಉಗ್ರರ ದಾಳಿಯಾಗಿದ್ದು, ರಾಜಕೀಯ ಲಾಭಕ್ಕಾಗಿ ಕೋಮುವಾದೀಕರಿಸಬಾರದು, ಭಯೋತ್ಪಾದನೆ ವಿರುದ್ಧ ದೇಶ ಒಂದೇ ನಿಲುವು ತಾಳಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಮುಂಬರುವ ಲೋಕಸಭಾ ಚುನಾವಣೆ ಮೇಲೆ ಶಬರಿಮಲೆ ವಿವಾದ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ಕಮ್ಯೂನಿಸ್ಟ್ ಪಕ್ಷಕ್ಕೆ ಪ್ರತಿಸ್ಪರ್ಧಿಗಳಾಗಿವೆ ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


