ಸೇನೆಯ 'ಆಪರೇಷನ್ ಆಲೌಟ್' ಯಶಸ್ವಿ; ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಸೇರಿ 2 ಉಗ್ರರ ಹತ್ಯೆ
ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಭಾರತೀಯ ಸೇನೆ ಆರಂಭಿಸಿರುವ ಆಪರೇಷನ್ ಆಲೌಟ್ ಯಶಸ್ವಿಯಾಗಿದ್ದು, ಪುಲ್ವಾಮ ಉಗ್ರ ದಾಳಿ ಮಾಸ್ಟರ್ ಮೈಂಡ್ ಹಾಗೂ ಜೆಇಎಂ ಕಮಾಂಡರ್ ಅಬ್ದುಲ್ ರಷೀದ್ ಘಾಜಿ ಸೇರಿದಂತೆ ಒಟ್ಟು 2 ಉಗ್ರರನ್ನು ಹತ್ಯೆಗೈಯ್ಯಲಾಗಿದೆ.

Published On :
ಪುಲ್ವಾಮ: ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಭಾರತೀಯ ಸೇನೆ ಆರಂಭಿಸಿರುವ ಆಪರೇಷನ್ ಆಲೌಟ್ ಯಶಸ್ವಿಯಾಗಿದ್ದು, ಪುಲ್ವಾಮ ಉಗ್ರ ದಾಳಿ ಮಾಸ್ಟರ್ ಮೈಂಡ್ ಹಾಗೂ ಜೆಇಎಂ ಕಮಾಂಡರ್ ಅಬ್ದುಲ್ ರಷೀದ್ ಘಾಜಿ ಸೇರಿದಂತೆ ಒಟ್ಟು 2 ಉಗ್ರರನ್ನು ಹತ್ಯೆಗೈಯ್ಯಲಾಗಿದೆ.
ಪುಲ್ವಾಮದ ಪಿಂಗ್ಲಾನ್ ಪ್ರಾಂತ್ಯದ ಕಟ್ಟಡವೊಂದರದಲ್ಲಿ ಅಡಗಿ ಕುಳಿತಿದ್ದ ಉಗ್ರರ ವಿರುದ್ಧ ಸೇನೆ ಆರಂಭಿಸಿದ್ದ ಕಾರ್ಯಾಚರಣೆ ಭಾಗಶಃ ಯಶಸ್ವಿಯಾಗಿದ್ದು, ಮಾಸ್ಟರ್ ಮೈಂಡ್ ಅಬ್ದುಲ್ ರಷೀದ್ ಘಾಜಿ ಸೇರಿದಂತೆ ಕಟ್ಟಡದಲ್ಲಿದ್ದ ನಾಲ್ಕೂ ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಸೇನಾ ಮೂಲಗಳು ತಿಳಿಸಿರುವಂತೆ ಪ್ರಸ್ತುತ ಕಟ್ಟಡದಲ್ಲಿದ್ದ ಎಲ್ಲ ಉಗ್ರರರನ್ನೂ ಹತ್ಯೆಗೈಯ್ಯಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಕಟ್ಟಡದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ವೇಳೆ ಕಟ್ಟಡದಲ್ಲಿ ಉಗ್ರರು ಇಟ್ಟುಕೊಂಡಿದ್ದ ಅಪಾರ ಪ್ರಮಾಣದ ಸ್ಫೋಟಕ ಮತ್ತು ಶಸ್ತ್ರಾಸ್ತ್ರಗಳ ಪತ್ತೆಯಾಗಿದ್ದು, ಎಲ್ಲವನ್ನೂ ಸೇನೆ ವಶಕ್ಕೆ ಪಡೆದಿದೆ. ಅಂತೆಯೇ ಪಿಂಗ್ಲಾನ್ ಪ್ರಾಂತ್ಯದ ಸುತ್ತಮುತ್ತಲ ಸುಮಾರು 18 ಗ್ರಾಮಗಳಲ್ಲಿ ಸೇನೆಯ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎನ್ನಲಾಗಿದೆ.
ಜನವಸತಿ ಪ್ರದೇಶದತ್ತ ಪರಾರಿಯಾದ ಉಗ್ರರು
ಇನ್ನು ತಮ್ಮ ಸಹ ಉಗ್ರರನ್ನು ಸೇನೆ ಹೊಡೆದುರುಳಿಸುತ್ತಿದ್ದಂತೆಯೇ ಉಗ್ರರು ಕಟ್ಟಡದಿಂದ ಪರಾರಿಯಾಗಿದ್ದಾರೆ. ಸಮೀಪದ ಜನನಿಭಿಡ ಪ್ರದೇಶಗಳತ್ತ ಉಗ್ರರು ಪರಾರಿಯಾದಿದ್ದು, ಪರಾರಿಯಾಗಿರುವ ಉಗ್ರರಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ. ಇನ್ನು ಸೇನೆಯ ಶೋಧ ಕಾರ್ಯಾಚರಣೆಗೆ ಸ್ಥಳೀಯರು ಅಡ್ಡಿಯಾಗಿದ್ದು, ಸೇನೆ ವಿರುದ್ಧ ಘೋಷಣೆಗಳನ್ನು ಕೂಗಿ ಕಲ್ಲುತೂರಾಟ ನಡೆಸುತ್ತಿದ್ದಾರೆ. ಅಲ್ಲದೆ ಸೇನೆಯ ಶೋಧ ಕಾರ್ಯಾಚರಣೆಗೆ ಅಡ್ಡಿಯಾಗಿದ್ದಾರೆ.
ಇನ್ನು ಅಬ್ದುಲ್ ರಷೀದ್ ಘಾಜಿ ಜೆಇಎಂ ಉಗ್ರ ಸಂಘಟನೆಯ ಪ್ರಮುಖ ಕಮಾಂಡರ್ ಆಗಿದ್ದು, ಕಾಶ್ಮೀರದಲ್ಲಿ ಉಗ್ರ ಸಂಘಟನೆಗೆ ಯುವಕರನ್ನು ಸೆಳೆಯುವ ಮತ್ತು ಅವರಿಗೆ ತರಬೇತಿ ನೀಡುವ ಮೇಲುಸ್ತುವಾರಿ ನೊಡಿಕೊಳ್ಳುತ್ತಿದ್ದ ಎಂದು ತಿಳಿದುಬಂದಿದೆ. ಅಲ್ಲದೆ ಕಳೆದ ಫೆಬ್ರವರಿ ನಾಲ್ಕರಂದು ಪುಲ್ವಾಮ ಹೊರವಲಯದಲ್ಲಿ ನಡೆದ ಸೇನಾವಾಹನಗಳ ಮೇಲಿನ ಆತ್ಮಹತ್ಯಾ ಬಾಂಬ್ ದಾಳಿಯ ನೇತೃತ್ವವನ್ನೂ ಕೂಡ ಇದೇ ಅಬ್ದುಲ್ ರಷೀದ್ ಘಾಜಿ ವಹಿಸಿಕೊಂಡಿದ್ದ ಎಂದು ಹೇಳಲಾಗಿದೆ.
ಇದೀಗ ಈತನನ್ನು ಮತ್ತು ಈತನ ಸಹಚರರನ್ನು ಸೇನಾಪಡೆ ಸುತ್ತುವರೆದಿದ್ದು, ಕಾರ್ಯಾಚರಣೆ ಮುಂದುವರೆದಿದಿದೆ.
ಇನ್ನು ಇಂದು ಬೆಳಗ್ಗೆ ನಡೆದ ಕಾರ್ಯಾಚರಣೆಯಲ್ಲಿ ಸೇನೆಯ ಮೇಜರ್ ಹಾಗೂ ಓರ್ವ ನಾಗರಿಕ ಸೇರಿದಂತೆ ಒಟ್ಟು 5 ಮಂದಿ ಸಾವನಪ್ಪಿದ್ದರು. ಹುತಾತ್ಮ ಯೋಧರನ್ನು ಮೇಜರ್ ವಿ ಎಸ್ ಧೌಂಡಿಯಾಲ್, ಹವಾಲ್ದಾರ್ ಶಿಯೋ ರಾಮ್, ಸಿಪಾಯಿ ಅಜಯ್ ಕುಮಾರ್ ಮತ್ತು ಸಿಪಾಯಿ ಹರಿ ಸಿಂಗ್ ಎಂದು ಗುರುತಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಜಮ್ಮು ಮತ್ತು ಕಾಶ್ಮೀರJammu and KashmirCRPFಭಾರತೀಯ ಸೇನೆಪುಲ್ವಾಮಸಿಆರ್ ಪಿಎಫ್PulwamaPulwama Terror Attackಪುಲ್ವಾಮ ಉಗ್ರ ದಾಳಿOperation Alloutಆಪರೇಷನ್ ಆಲೌಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


