ಮುಂಬೈ: ಆಕೆಯ ಬರ್ತ್ ಡೇ ಪಾರ್ಟಿಯಲ್ಲೇ ಯುವತಿ ಮೇಲೆ ಅತ್ಯಾಚಾರ
ಪ್ರಿಯಕರನ ಮನೆಯಲ್ಲಿ ಆಯೋಜಿಸಿದ್ದ ಬರ್ತಡೇ ಪಾರ್ಟಿಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ....

Published On :
ಮುಂಬೈ: ಪ್ರಿಯಕರನ ಮನೆಯಲ್ಲಿ ಆಯೋಜಿಸಿದ್ದ ಬರ್ತ್ ಡೇ ಪಾರ್ಟಿಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಪಲ್ಘಹಾರ್ ಜಿಲ್ಲೆಯಲ್ಲಿ ನಡೆದಿದೆ.
ಯುವತಿಯ ಪ್ರಿಯಕರ ತನ್ನ ಸ್ನೇಹಿತನೊಂದಿಗೆ ಸೇರಿ ಆಕೆಗೆ ಚೆನ್ನಾಗಿ ಕುಡಿಸಿ ನಶೆ ಏರುವಂತೆ ಮಾಡಿ ಅತ್ಯಾಚಾರ ಎಸಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಸಂತ್ರಸ್ಥೆಯು ನಶೆಯಲ್ಲಿದ್ದಾಗ ಸ್ನೇಹಿತನೊಂದಿಗೆ ಸೇರಿ ಇಬ್ಬರು ಅತ್ಯಾಚಾರ ಎಸಗಿದ್ದು, ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆವೊಡ್ಡಿದ್ದಾರೆ.
ಮುಂಬೈನ ಕಂದಿವಾಲಿ ನಿವಾಸಿಯಾಗಿರುವ 27 ವರ್ಷದ ಯುವತಿಯು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸರು ಆರೋಪಿಗಳಿಬ್ಬರ ವಿರುದ್ಧ ಅತ್ಯಾಚಾರ ಮತ್ತು ಕ್ರಿಮಿನಲ್ ಬೆದರಿಕೆ ದೂರನ್ನು ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


