ಎನ್ ಕೌಂಟರ್: ಪುಲ್ವಾಮ ಉಗ್ರ ದಾಳಿ ಮಾಸ್ಟರ್ ಮೈಂಡ್ ಸೇರಿ, ಇಬ್ಬರು ಜೆಇಎಮ್ ಉಗ್ರರು ಹತ
ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಇಂದು ನಡೆಯುತ್ತಿರುವ ಎನ್ಕೌಂಟರ್ ನಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ.

Published On :
ಪುಲ್ವಾಮ: ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಇಂದು ನಡೆಯುತ್ತಿರುವ ಎನ್ಕೌಂಟರ್ ನಲ್ಲಿ ಪುಲ್ವಾಮ ಉಗ್ರ ದಾಳಿ ಮಾಸ್ಟರ್ ಮೈಂಡ್ ಅಬ್ದುಲ್ ರಷೀದ್ ಘಾಜಿ ಸೇರಿದಂತೆ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ.
ಪುಲ್ವಾಮದ ಪಿಂಗ್ಲಾನ್ ಪ್ರಾಂತ್ಯದಲ್ಲಿ ಉಗ್ರರು ಹಾಗೂ ಸೈನಿಕರ ನಡುವೆ ಭೀಕರ ಚಕಮಕಿ ನಡೆಯುತ್ತಿದ್ದು, ಸೇನೆಯ ಗುಂಡಿಗೆ ಇದೀಗ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಪೈಕಿ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಅಬ್ದುಲ್ ರಷೀದ್ ಘಾಜಿ ಕೂಡ ಸೇರಿದ್ದಾನೆ ಎನ್ನಲಾಗಿದೆ. ಅಂತೆಯೇ ಹತನಾದ ಮತ್ತೋರ್ವ ನನ್ನು ಜೆಇಎಂ ಕಮಾಂಡರ್ ಹಿಲಾಲ್ ಎಂದು ಗುರುತಿಸಲಾಗಿದೆ.
ಅಬ್ದುಲ್ ರಷೀದ್ ಘಾಜಿ ಜೆಇಎಂ ಉಗ್ರ ಸಂಘಟನೆಯ ಪ್ರಮುಖ ಕಮಾಂಡರ್ ಆಗಿದ್ದು, ಕಾಶ್ಮೀರದಲ್ಲಿ ಉಗ್ರ ಸಂಘಟನೆಗೆ ಯುವಕರನ್ನು ಸೆಳೆಯುವ ಮತ್ತು ಅವರಿಗೆ ತರಬೇತಿ ನೀಡುವ ಮೇಲುಸ್ತುವಾರಿ ನೊಡಿಕೊಳ್ಳುತ್ತಿದ್ದ ಎಂದು ತಿಳಿದುಬಂದಿದೆ. ಅಲ್ಲದೆ ಕಳೆದ ಫೆಬ್ರವರಿ ನಾಲ್ಕರಂದು ಪುಲ್ವಾಮ ಹೊರವಲಯದಲ್ಲಿ ನಡೆದ ಸೇನಾವಾಹನಗಳ ಮೇಲಿನ ಆತ್ಮಹತ್ಯಾ ಬಾಂಬ್ ದಾಳಿಯ ನೇತೃತ್ವವನ್ನೂ ಕೂಡ ಇದೇ ಅಬ್ದುಲ್ ರಷೀದ್ ಘಾಜಿ ವಹಿಸಿಕೊಂಡಿದ್ದ ಎಂದು ತಿಳಿದುಬಂದಿದೆ.
ಘಟನಾ ಪ್ರದೇಶದಲ್ಲಿ ಮತ್ತಿಬ್ಬರು ಉಗ್ರರು ಅವಿತಿರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರೆದಿದೆ.
ಇನ್ನು ಇಂದು ಬೆಳಗ್ಗೆ ನಡೆದ ಕಾರ್ಯಾಚರಣೆಯಲ್ಲಿ ಸೇನೆಯ ಮೇಜರ್ ಹಾಗೂ ಓರ್ವ ನಾಗರಿಕ ಸೇರಿದಂತೆ ಒಟ್ಟು 5 ಮಂದಿ ಸಾವನಪ್ಪಿದ್ದರು. ಹುತಾತ್ಮ ಯೋಧರನ್ನು ಮೇಜರ್ ವಿ ಎಸ್ ಧೌಂಡಿಯಾಲ್, ಹವಾಲ್ದಾರ್ ಶಿಯೋ ರಾಮ್, ಸಿಪಾಯಿ ಅಜಯ್ ಕುಮಾರ್ ಮತ್ತು ಸಿಪಾಯಿ ಹರಿ ಸಿಂಗ್ ಎಂದು ಗುರುತಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಜಮ್ಮು ಮತ್ತು ಕಾಶ್ಮೀರJammu and Kashmirಭಾರತೀಯ ಸೇನೆಪುಲ್ವಾಮPulwamaPulwama Terror Attackಪುಲ್ವಾಮ ಉಗ್ರ ದಾಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


