ಭಾರತೀಯ ಸೇನಾ ಅಧಿಕಾರಿ ಕಪಾಳ ಮೋಕ್ಷಕ್ಕೆ ತತ್ತರಿಸಿ ನಡುಗಿದ್ದ ಜೈಶ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್!
2001 ರಲ್ಲಿ ಸಂಸತ್ ಮೇಲಿನ ದಾಳಿ, ನಂತರ ಮುಂಬೈ ನಲ್ಲಿ ಭಯೋತ್ಪಾದಕ ಕೃತ್ಯ, ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಈಗ 44 ಯೋಧರ ಜೀವ ತೆಗೆದಿರುವ ಪೈಶಾಚಿಕ ಸಂಘಟನೆ ಜೈಶ್-ಇ-ಮೊಹಮ್ಮದ್ ಉಗ್ರ

Published On :
ನವದೆಹಲಿ: 2001 ರಲ್ಲಿ ಸಂಸತ್ ಮೇಲಿನ ದಾಳಿ, ನಂತರ ಮುಂಬೈ ನಲ್ಲಿ ಭಯೋತ್ಪಾದಕ ಕೃತ್ಯ, ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಈಗ 44 ಯೋಧರ ಜೀವ ತೆಗೆದಿರುವ ಪೈಶಾಚಿಕ ಸಂಘಟನೆ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಹಿಂದೊಮ್ಮೆ ಭಾರತೀಯ ಸೈನಿಕರ ಕೈಗೆ ಸಿಕ್ಕಿಹಾಕಿಕೊಂಡಿದ್ದ.
ಬಾಂಗ್ಲಾದೇಶದ ಮೂಲಕ ಭಾರತ ಪ್ರವೇಶಿಸಲು ಪೋರ್ಚುಗೀಸ್ ಪಾಸ್ಪೋರ್ಟ್ ನ್ನು ಬಳಕೆ ಮಾಡಿದ್ದ ಮಸೂದ್ ಅಜರ್ ನ್ನು 1994 ರಲ್ಲಿ ಅನಂತ್ ನಾಗ್ ನಲ್ಲಿ ಬಂಧಿಸಲಾಗಿತ್ತು. ವಿಚಾರಣೆ ನಡೆಸುತ್ತಿದ್ದ ವೇಳೆ ಮಸೂದ್ ಅಜರ್ ಕೆನ್ನೆಗೆ ಯೋಧರು ಸರಿಯಾಗೇ ಬಿಗಿದಿದ್ದರು. ಯೋಧರ ಹೊಡೆತಕ್ಕೆ ತತ್ತರಿಸಿ ನಡುಗಿದ್ದ ಮಸೂದ್ ಅಜರ್ ಬಳಿಕ ಸೇನೆಗೆ ಪಾಕಿಸ್ತಾನದಿಂದ ಕಾರ್ಯಾಚರಣೆ ನಡೆಸುತ್ತಿದ್ದ ಭಯೋತ್ಪಾದಕ ಗುಂಪುಗಳ ಬಗ್ಗೆ ಮಹತ್ವದ ಮಾಹಿತಿಗಳನ್ನು ನೀಡಿದ್ದ. ಈ ಘಟನೆಯನ್ನು ಪುಲ್ವಾಮ ದಾಳಿಯ ಬೆನ್ನಲ್ಲೆ ಮಾಜಿ ಪೊಲೀಸ್ ಅಧಿಕಾರಿಯೊಬ್ಬರು ನೆನಪಿಸಿಕೊಂಡಿದ್ದಾರೆ.
ಮಸೂದ್ ಅಜರ್ ನ್ನು ಸುಲಭವಾಗಿ ನಿರ್ವಹಿಸಬಹುದು. ಅಂದು ಸೇನಾ ಅಧಿಕಾರಿಯ ಹೊಡೆತಕ್ಕೆ ಮಸೂದ್ ಅಜರ್ ತತ್ತರಿಸಿ ನಡುಗಿದ್ದ ಎಂದು 1994 ರಲ್ಲಿ ಮಸೂದ್ ಅಜರ್ ನ್ನು ತನಿಖೆ ಮಾಡಿದ್ದ ಸಿಕ್ಕಿಂ ಪೊಲೀಸ್ ವಿಭಾಗದ ಪೊಲೀಸ್ ನಿರ್ದೇಶಕ ಅವಿನಾಶ್ ಮೊಹಾನನಿ ಹೇಳಿದ್ದಾರೆ.
ಐಸಿ-814 ವಿಮಾನ ಹೈಜಾಕ್ ಹಿನ್ನೆಲೆಯಲ್ಲಿ ಭಯೋತ್ಪಾದಕರ ಬೇಡಿಕೆಯಂತೆ 1999 ರಲ್ಲಿ ಅಂದಿನ ಸರ್ಕಾರ ಮಸೂದ್ ಅಜರ್ ನ್ನು ಬಿಡುಗಡೆ ಮಾಡಿತ್ತು. ಇದಾದ ಬಳಿಕವೇ ಮಸೂದ್ ಅಜರ್ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಸ್ಥಾಪಿಸಿ ಭಾರತದ ಸಂಸತ್ ಮೆಲೆ, ಪಠಾಣ್ ಕೋಟ್ ವಾಯುನೆಲೆ ಮೇಲೆ, ಜಮ್ಮು-ಕಾಶ್ಮೀರದ ಸೇನಾ ಕ್ಯಾಂಪ್ ಗಳ ಮೇಲೆ, ಈಗ ಸಿಆರ್ ಪಿಎಫ್ ಯೋಧರ ಮೇಲೆ ದಾಳಿ ನಡೆಸಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


