ದೇಶ

ಕೇರಳ ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ: ಹಂತಕರಿಗೆ ಶಿಕ್ಷೆ ಆಗುವವರೆಗೂ ವಿರಾಮಿಸುವುದಿಲ್ಲ- ರಾಹುಲ್

ಯುವ ಕಾಂಗ್ರೆಸ್ ಕಾರ್ಯಕರ್ತರ ಬರ್ಬರ ಹತ್ಯೆಯಿಂದ ಕೇರಳ ಆತಂಕಗೊಂಡಿದ್ದು, ಹಂತಕರಿಗೆ ಶಿಕ್ಷೆಗೊಳಪಡಿಸದೆ ಕಾಂಗ್ರೆಸ್ ಪಕ್ಷ ವಿರಾಮಿಸುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಕೇರಳ ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ: ಹಂತಕರಿಗೆ ಶಿಕ್ಷೆ ಆಗುವವರೆಗೂ ವಿರಾಮಿಸುವುದಿಲ್ಲ- ರಾಹುಲ್
ರಾಹುಲ್ ಗಾಂಧಿ
Published On :

ನವದೆಹಲಿ: ಯುವ ಕಾಂಗ್ರೆಸ್ ಕಾರ್ಯಕರ್ತರ  ಬರ್ಬರ ಹತ್ಯೆಯಿಂದ ಕೇರಳ ಆತಂಕಗೊಂಡಿದ್ದು, ಹಂತಕರಿಗೆ  ಶಿಕ್ಷೆಗೊಳಪಡಿಸದೆ ಕಾಂಗ್ರೆಸ್ ಪಕ್ಷ ವಿರಾಮಿಸುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಕಾಸರಗೋಡಿನ ಉತ್ತರ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಅಪರಿಚಿತರು ಹಲ್ಲೆ ನಡೆಸಿ  ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ  ಎಂದು ಪೊಲೀಸರು ತಿಳಿಸಿದ್ದಾರೆ.

ಯುವ ಕಾಂಗ್ರೆಸ್ ಸದಸ್ಯರ ಹತ್ಯೆಯಿಂದ ಕೇರಳದಲ್ಲಿ ಆತಂಕ ಮನೆ ಮಾಡಿದ್ದು, ಪಕ್ಷ ಅವರ ಕುಟುಂಬ ಸದಸ್ಯರ ಪರವಾಗಿ ನಿಲ್ಲಲಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಮೃತರ ಕುಟುಂಬ ಸದಸ್ಯರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಕೊಲೆಗಳು ಕ್ಷಮಿಸಲಾಗದ ಆಕ್ಷಮ್ಯ ಅಪರಾಧವಾಗಿವೆ ಎಂದು  ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ  ಹತ್ಯೆ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಹಂತಕರನ್ನು ಶಿಕ್ಷೆಗೊಳಪಡಿಸುವವರೆಗೂ ಒತ್ತಾಯವನ್ನು ಕಾಂಗ್ರೆಸ್ ಪಕ್ಷ ಮುಂದುವರೆಸಲಿದೆ ಎಂದು ಅವರು ಹೇಳಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.