ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.3ರಷ್ಟು ಹೆಚ್ಚಳ
ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ. 3ರಷ್ಟು ಹೆಚ್ಚಳ ಮಾಡಲು ಮಂಗಳವಾರ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

Published On :
ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ. 3ರಷ್ಟು ಹೆಚ್ಚಳ ಮಾಡಲು ಮಂಗಳವಾರ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದ್ದು, ಇದರಿಂದ 1.1 ಕೋಟಿ ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ ಪಿಂಚಣಿದಾರರಿಗೆ ಅನುಕೂಲವಾಗಲಿದೆ.
ಕೇಂದ್ರ ಸರ್ಕಾರಿ ನೌಕರರು ಸದ್ಯ ಶೇ. 9 ರಷ್ಟು ತುಟ್ಟಿ ಭತ್ಯೆ ಪಡೆಯುತ್ತಿದ್ದು, ಅದನ್ನು ಈಗ ಶೇ.12ಕ್ಕೆ ಏರಿಕೆ ಮಾಡಲಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು, ಜನವರಿ 1, 2019ರಿಂದ ಪೂರ್ವಾನ್ವಯವಾಗುಂತೆ ಇದನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


