ದೇಶ

ಪಾಕಿಸ್ತಾನ ಭೇಟಿ ನಂತರ ಭಾರತಕ್ಕೆ ಆಗಮಿಸಿದ ಸೌದಿ ರಾಜ: ಮೋದಿಯಿಂದ ಸ್ವಾಗತ

ನೆರೆ ರಾಷ್ಟ್ರ ಪಾಕಿಸ್ತಾನ ಭೇಟಿ ನಂತರ ಸೌದಿ ಅರೇಬಿಯಾದ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ಫೆ.19 ರಂದು ಭಾರತಕ್ಕೆ ಆಗಮಿಸಿದ್ದಾರೆ.

ಪಾಕಿಸ್ತಾನ ಭೇಟಿ ನಂತರ ಭಾರತಕ್ಕೆ ಆಗಮಿಸಿದ ಸೌದಿ ರಾಜ: ಮೋದಿಯಿಂದ ಸ್ವಾಗತ
ಪಾಕಿಸ್ತಾನ ಭೇಟಿ ನಂತರ ಭಾರತಕ್ಕೆ ಆಹಮಿಸಿದ ಸೌದಿ ರಾಜ: ಮೋದಿಯಿಂದ ಸ್ವಾಗತ
Published On :
ನವದೆಹಲಿ: ನೆರೆ ರಾಷ್ಟ್ರ ಪಾಕಿಸ್ತಾನ ಭೇಟಿ ನಂತರ ಸೌದಿ ಅರೇಬಿಯಾದ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ಫೆ.19 ರಂದು ಭಾರತಕ್ಕೆ ಆಗಮಿಸಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಶಿಷ್ಟಾಚಾರವನ್ನು ಬದಿಗೊತ್ತಿ ವಿಮಾನ ನಿಲ್ದಾಣಕ್ಕೆ ತೆರಳಿ ಸೌದಿ ಅರೇಬಿಯಾ ರಾಜನನ್ನು ಸ್ವಾಗತಿಸಿದ್ದಾರೆ. 
ಇದೇ ಮೊದಲಬಾರಿಗೆ ಸೌದಿ ಅರೇಬಿಯಾ ರಾಜ ಭಾರತಕ್ಕೆ ಭೇಟಿ ನೀಡಿದ್ದು, ಉಭಯ ರಾಷ್ಟ್ರಗಳ ದ್ವಿಪಕ್ಷೀಯ ಸಂಬಂಧದಲ್ಲಿ ಮಹತ್ವವಾದ ಅಧ್ಯಾಯ ಪ್ರಾರಂಭವಾಗಲಿದೆ ಎಂದು ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ. 
ಭಾರತದಲ್ಲಿ ಸೌದಿ ಅರೇಬಿಯಾ ರಾಜ 2 ದಿನಗಳ ಕಾಲ ಇರಲಿದ್ದು, ದ್ವಿಪಕ್ಷೀಯ ಮಾತುಕತೆ ವೇಳೆ ಭಾರತ ಭಯೋತ್ಪಾದನೆ ವಿರುದ್ಧದ ಹೋರಾಟದ ಕುರಿತಂತೆ ಸೌದಿ ಅರೇಬಿಯಾ ಜೊತೆ ಮಾತನಾಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.