ದೇಶ

ನಾಲ್ಕು ವಾರದಲ್ಲಿ ರೂ.453 ಕೋಟಿ ಹಣ ಪಾವತಿಸಿ, ಇಲ್ಲವೇ ಜೈಲಿಗೆ ಹೋಗಿ: ಅನಿಲ್ ಅಂಬಾನಿಗೆ 'ಸುಪ್ರಿಂ' ಆದೇಶ

ಎರಿಕ್ಸನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಸಂಸ್ಥೆಯ ಅನಿಲ್‌ ಅಂಬಾನಿಗೆ ಸುಪ್ರೀಂ ಕೋರ್ಟ್ ನಲ್ಲಿ ಭಾರೀ ಮುಖಭಂಗವಾಗಿದೆ. ..

ನಾಲ್ಕು ವಾರದಲ್ಲಿ ರೂ.453 ಕೋಟಿ ಹಣ ಪಾವತಿಸಿ, ಇಲ್ಲವೇ ಜೈಲಿಗೆ ಹೋಗಿ: ಅನಿಲ್ ಅಂಬಾನಿಗೆ 'ಸುಪ್ರಿಂ' ಆದೇಶ
ಅನಿಲ್ ಅಂಬಾನಿ
Published On :
ನವದೆಹಲಿ: ಎರಿಕ್ಸನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಸಂಸ್ಥೆಯ ಅನಿಲ್‌ ಅಂಬಾನಿಗೆ  ಸುಪ್ರೀಂ ಕೋರ್ಟ್ ನಲ್ಲಿ ಭಾರೀ ಮುಖಭಂಗವಾಗಿದೆ. 
ಎರಿಕ್ಸನ್‌ ಗೆ  ರಿಲಾಯನ್ಸ್ ಗ್ರೂಪ್ 550 ಕೋಟಿ ರು. ಹಣ ನೀಡಬೇಕಾಗಿದ್ದು, ಕೂಡಲೇ  4 ವಾರದಲ್ಲಿ  ಹಣವನ್ನು ಪಾವತಿಸುವಂತೆ ಅನಿಲ್‌ ಅಂಬಾನಿಗೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ. 
ನಾಲ್ಕು ವಾರದಲ್ಲಿ  ರೂ.ಹಣ ಹಿಂದಿರುಗಿಸಿ ಅಥವಾ ಜೈಲು ಶಿಕ್ಷೆ ಅನುಭವಿಸಿ ಎಂದು ಸುಪ್ರೀಂ ಕೋರ್ಟ್‌ ನ್ಯಾಯಪೀಠ ಆದೇಶಿಸಿದೆ. 
ಎರಿಕ್ಸನ್‌ ಪ್ರಕರಣದಲ್ಲಿ ಅನಿಲ್ ಅಂಬಾನಿ ನ್ಯಾಯಾಂಗ ನಿಂದನೆ ಮಾಡಿರುವುದು ಸ್ಪಷ್ಟವಾಗಿದೆ. ಈ ಕೂಡಲೇ ಅವರು ಹಣ ಹಿಂದಿರುಗಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ರಿಲಯನ್ಸ್‌ ಕಮ್ಯುನಿಕೇಷನ್ಸ್‌ ಕಂಪನಿ ಉದ್ದೇಶಪೂರ್ವಕವಾಗಿ ಹಣ ಹಿಂದಿರುಗಿಸಿಲ್ಲ. ಈ ಹಿಂದೆ ಸೂಚನೆ ನೀಡಿದ್ದರು ಅದನ್ನು ಪಾಲಿಸಿಲ್ಲ ಎಂದು ಸುಪ್ರೀಂಕೋರ್ಟ್‌ ನ್ಯಾಯಪೀಠ ಗಮನ ಸೆಳೆದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.