ಅಯೋಧ್ಯೆ ವಿವಾದ: ಫೆಬ್ರವರಿ 26ರಂದು ಪಂಚ ಸದಸ್ಯರ ಪೀಠ ವಿಚಾರಣೆ
ಅಯೋಧ್ಯೆ ರಾಮಜನ್ಮಭೂಮಿ ಭೂ ವಿವಾದ ಪ್ರಕರಣವನ್ನು ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಫೆಬ್ರವರಿ 26ರಂದು ವಿಚಾರಣೆಗೆ ತೆಗೆದುಕೊಳ್ಳಲಿದೆ.

Published On :
ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ ಭೂ ವಿವಾದ ಪ್ರಕರಣವನ್ನು ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಫೆಬ್ರವರಿ 26ರಂದು ವಿಚಾರಣೆಗೆ ತೆಗೆದುಕೊಳ್ಳಲಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ , ನ್ಯಾಯಮೂರ್ತಿಗಳಾದ ಎಸ್.ಎ. ಬೋಬ್ಡೆ, ಡಿ ವೈ ಚಂದ್ರಚೂಡ, ಅಶೋಕ್ ಭೂಷಣ್ ಹಾಗೂ ಅಬ್ದುಲ್ ನಝೀರ್ ರವನ್ನೊಳಗೊಂಡ ಪಂಚ ಸದಸ್ಯರ ಸಾಂವಿಧಾನಿಕ ಪೀಠ ಅಯೋಧ್ಯೆ ವಿವಾದದ ವಿಚಾರಣೆ ನಡೆಸಲಿದೆ.
ಜನವರಿಯಲ್ಲಿ ಮುಖ್ಯ ನ್ಯಾಯಮೂರ್ತಿ ಗೊಗೋಯ್ ರಚಿಸಿದ್ದ ಐವರು ಸದಸ್ಯರ ಪೀಠದ ಓರ್ವ ಸದಸ್ಯ ಬೋಬ್ಡೆರಜೆ ಮೇಲೆ ತೆರಳಿದ್ದ ಕಾರಣ ಪ್ರಕರಣದ ವಿಚಾರಣೆ ವಿಳಂಬವಾಗಿತ್ತು. ಇದೀಗ ನ್ಯಾಯಾಧೀಶರು ರಜೆ ಮುಗಿಸಿ ಹಿಂತಿರುಗಿದ್ದು ಮುಂದಿನ ವಿಚಾರಣೆ ದಿನಾಂಕ ನಿಗದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Babri MasjidRam Janmabhoomiಬಾಬ್ರಿ ಮಸೀದಿಅಯೋಧ್ಯೆ ವಿವಾದಸಾಂವಿಧಾನಿಕ ಪೀಠರಾಮಜನ್ಮಭೂಮಿAyodhya land disputeSC constitution bench
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


