ರೈಲಿನ ಶೌಚಾಲಯದಲ್ಲಿ ಸ್ಫೋಟ, ಕಾನ್ಪುರ - ಭಿವಾನಿ ಕಾಲಿಂದಿ ಎಕ್ಸ್‌ಪ್ರೆಸ್ ಗೆ ಹಾನಿ
ಕಾನ್ಪುರ- ಭಿವಾನಿ ಕಾಲಿಂದಿ ಎಕ್ಸ್‌ಪ್ರೆಸ್ ರೈಲಿನ ಶೌಚಾಲಯದಲ್ಲಿ ಬುಧವಾರ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದ್ದು, ಯಾವುದೇ ಪ್ರಾಣ ಹಾನಿಯ ಬಗ್ಗೆ ವರದಿಯಾಗಿಲ್ಲ.

Published On :
ಕಾನ್ಪುರ: ಕಾನ್ಪುರ- ಭಿವಾನಿ ಕಾಲಿಂದಿ ಎಕ್ಸ್‌ಪ್ರೆಸ್ ರೈಲಿನ ಶೌಚಾಲಯದಲ್ಲಿ ಬುಧವಾರ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದ್ದು, ಯಾವುದೇ ಪ್ರಾಣ ಹಾನಿಯ ಬಗ್ಗೆ ವರದಿಯಾಗಿಲ್ಲ.
ಇಂದು ಸಂಜೆ 7.10ರ ಸುಮಾರಿಗೆ ಉತ್ತರ ಪ್ರದೇಶದ ಕಾನ್ಪುರ ಸಮೀಪ ರೈಲಿನ ಸಾಮಾನ್ಯ ಕೋಚ್ ನ ಶೌಚಾಲಯಲ್ಲಿ ಸ್ಫೋಟ ಸಂಭವಿಸಿದ್ದು, ಕಡಿಮೆ ತೀವ್ರತೆಯ ಸ್ಫೋಟವಾಗಿದ್ದರಿಂದ ಯಾರೂ ಗಾಯಗೊಂಡಿಲ್ಲ ಮತ್ತು ರೈಲಿಗೂ ಹೆಚ್ಚಿನ ಹಾನಿ ಸಂಭವಿಸಿಲ್ಲ.
ಮುಂಜಾಗೃತಾ ಕ್ರಮವಾಗಿ ರೈಲು ನಿಲ್ದಾಣ ಮತ್ತು ರೈಲನ್ನು ಭದ್ರತಾ ಪಡೆಗಳು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ದೌಡಾಯಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಅಥವಾ ಯಾರಿಗೂ ಗಾಯಗಳಾಗಿಲ್ಲ. ಉಗ್ರ ನಿಗ್ರಹ ದಳದ ಅಧಿಕಾರಿಗಳು ರೈಲನ್ನು ಪರಿಶೀಲಿಸುತ್ತಿದ್ದು, ಅವರು ಅನುಮತಿ ನೀಡಿದ ನಂತರ ರೈಲು ನಿರ್ಗಮಿಸಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
blastಸ್ಫೋಟtrain toiletKanpur-Bhiwani Kalindi Expressರೈಲಿನ ಶೌಚಾಲಯಕಾನ್ಪುರ - ಭಿವಾನಿ ಕಾಲಿಂದಿ ಎಕ್ಸ್ ಪ್ರೆಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


