ಪಾಕ್-ಭಾರತದ ನಡುವೆ ಸೌದಿ ಮಧ್ಯಸ್ಥಿಕೆ?: ವಿದೇಶಾಂಗ ಸಚಿವಾಲಯ ಹೇಳಿದ್ದಿಷ್ಟು
ಪುಲ್ವಾಮದಲ್ಲಿ ಪಾಕಿಸ್ತಾನ ನಡೆಸಿರುವ ಭಯೋತ್ಪಾದಕ ದಾಳಿಯ ನಂತರ ಭಾರತಕ್ಕೆ ಆಗಮಿಸಿ ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿರುವ ಸೌದಿ ಅರೇಬಿಯಾ ರಾಜ ಮೊಹಮ್ಮದ್ ಬಿನ್ ಸಲ್ಮಾನ್...

Published On :
ಪುಲ್ವಾಮದಲ್ಲಿ ಪಾಕಿಸ್ತಾನ ನಡೆಸಿರುವ ಭಯೋತ್ಪಾದಕ ದಾಳಿಯ ನಂತರ ಭಾರತಕ್ಕೆ ಆಗಮಿಸಿ ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿರುವ ಸೌದಿ ಅರೇಬಿಯಾ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ಪಾಕಿಸ್ತಾನ ಪ್ರೇರಿತ ಉಗ್ರ ದಾಳಿಯನ್ನು ಖಂಡಿಸಿದ್ದಾರೆ.
ಮೋದಿ-ಸಲ್ಮಾನ್ ನಡುವಿನ ದ್ವಿಪಕ್ಷೀಯ ಮಾತುಕತೆ ವೇಳೆ ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆಯೂ ಮಾತುಕತೆ ನಡೆದಿದ್ದು, ವಿಶ್ವಸಂಸ್ಥೆಯಿಂದ ಭಯೋತ್ಪಾದಕ ಸಂಘಟನೆಗಳು ಹಾಗೂ ಭಯೋತ್ಪಾದಕರಿಗೆ ನಿಷೇಧ ವಿಧಿಸುವ ತುರ್ತನ್ನು ಇಬ್ಬರೂ ನಾಯಕರೂ ಮನಗಂಡಿದ್ದಾರೆ.
ದ್ವಿಪಕ್ಷೀಯ ಮಾತುಕತೆ ಬಗ್ಗೆ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದ್ದು, ಪುಲ್ವಾಮ ದಾಳಿಯಲ್ಲಿ ಪಾಕಿಸ್ತಾನದ ಕೈವಾಡ ಇರುವುದನ್ನು ಮಾತುಕತೆ ವೇಳೆ ಸೌದಿಯ ರಾಜ ಬಿನ್ ಸಲ್ಮಾನ್ ಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಹೇಳಿದೆ. ಇದೇ ವೇಳೆ ದ್ವಿಪಕ್ಷೀಯ ಮಾತುಕತೆ ಪುನಾರಂಭಗೊಳ್ಳುವುದಕ್ಕೆ ಅಗತ್ಯವಿರುವ ವಾತಾವರಣವನ್ನು ನಿರ್ಮಿಸುವ ಅಗತ್ಯತೆ ಕುರಿತೂ ಚರ್ಚಿಸಲಾಗಿದೆ. 2014 ರಿಂದ ಈ ವರೆಗೂ ಮೋದಿ ಪಾಕಿಸ್ತಾನದೊಂದಿಗೆ ಸೌಹಾರ್ದಯುತ ಸಂಬಂಧ ಮುಂದುವರೆಸಲು ಕೈಗೊಂಡಿರುವ ಕ್ರಮಗಳು ಹಾಗೂ ಶ್ರಮದ ಬಗ್ಗೆ ಸೌದಿ ಅರೇಬಿಯಾ ರಾಜ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.
ಇದೇ ವೇಳೆ ಪಾಕ್-ಭಾರತದ ನಡುವೆ ಮಧ್ಯಸ್ಥಿಕೆ ನಡೆಸುವ ಪ್ರಸ್ತಾಪ ಸೌದಿ ಅರೇಬಿಯಾದಿಂದ ಬಂದಿಲ್ಲ ಎಂದು ಎಂಇಎ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


