ಬಿಜೆಪಿ-ಶಿವಸೇನೆ ಮೈತ್ರಿ ಆದರೆ ಸಿಎಂ ಸ್ಥಾನದ ಕುರಿತು ಭಿನ್ನಾಭಿಪ್ರಾಯ ಖಾತ್ರಿ!
ಬಿಜೆಪಿ-ಶಿವಸೇನೆ ಮುಂಬರುವ ಲೋಕಸಭಾ ಚುನಾವಣೆ ಹಾಗೂ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿದ್ದು, ಸ್ಥಾನ ಹಂಚಿಕೆಯನ್ನೂ ಘೋಷಿಸಿವೆ. ಆದರೆ ಒಂದು ವಿಷಯದಲ್ಲಿ ಮಾತ್ರ ಭಿನ್ನಾಭಿಪ್ರಾಯ ಮುಂದುವರೆಯಲಿದೆ.

Published On :
ಮುಂಬೈ: ಬಿಜೆಪಿ-ಶಿವಸೇನೆ ಮುಂಬರುವ ಲೋಕಸಭಾ ಚುನಾವಣೆ ಹಾಗೂ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿದ್ದು, ಸ್ಥಾನ ಹಂಚಿಕೆಯನ್ನೂ ಘೋಷಿಸಿವೆ. ಆದರೆ ಒಂದು ವಿಷಯದಲ್ಲಿ ಮಾತ್ರ ಭಿನ್ನಾಭಿಪ್ರಾಯ ಮುಂದುವರೆಯಲಿದೆ.
2019 ರ ಲೋಕಸಭಾ ಚುನಾವಣೆ ನಂತರ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ನಂತರ ಮತ್ತೆ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬಂದರೆ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಷಯದ ಬಗ್ಗೆ ಬಿಜೆಪಿ-ಶಿವಸೇನೆ ಭಿನ್ನಾಭಿಪ್ರಾಯ ಹೊಂದಿವೆ.
ಶಿವಸೇನೆ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವುದು ಪಕ್ಷದ ಹೇಳಿಕೆಗಳಿಂದ ಸ್ಪಷ್ಟವಾಗಿ ಗೋಚರಿಸುತ್ತಿದೆ. ಲೋಕಸಭಾ ಚುನಾವಣೆಯಲ್ಲಿ 25-23 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದರೆ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಸ್ಥಾನಗಳನ್ನು ಸಮನಾಗಿ ಹಂಚಿಕೊಂಡಿವೆ. 2014 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಆದರೆ ಈ ಬಾರಿ ಸ್ಥಾನಗಳು ಸಮವಾಗಿ ಹಂಚಿಕೆಯಾಗಿರುವುದರಿಂದ ಸಿಎಂ ಗಾದಿಗಾಗಿ ಶಿವಸೇನೆ-ಬಿಜೆಪಿ ನಡುವೆ ಭಿನ್ನಾಭಿಪ್ರಾಯ ಉಂಟಾಗಲಿದೆ.
ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷ ಹೆಚ್ಚಿನ ಸ್ಥಾನ ಗೆಲ್ಲುತ್ತದೋ ಆ ಪಕ್ಷದವರು ಸಿಎಂ ಆಗಲಿದ್ದಾರೆ ಎಂಬ ಬಿಜೆಪಿ ಪ್ರಸ್ತಾವನೆಯನ್ನು ತಾವು ತಿರಸ್ಕರಿಸಿರುವುದಾಗಿ ಈಗಾಗಲೇ ಉದ್ಧವ್ ಠಾಕ್ರೆ ಪಕ್ಷದ ಕಾರ್ಯಕರ್ತರೆದುರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಶಿವಸೇನೆbjpಬಿಜೆಪಿMaharashtraCM post2019 electionsSena2019 ಲೋಕಸಭಾಚುನಾವಣೆಮಹಾರಾಷ್ಟ್ರ ವಿಧಾನಸಭಾ ಚುನಾವಣೆಮುಖ್ಯಮಂತ್ರಿ ಪದವಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


