ದೇಶ

ಪುಲ್ವಾಮಾ ಉಗ್ರ ದಾಳಿ: ಮಹಾರಾಷ್ಟ್ರದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಮಹರಾಷ್ಟ್ರದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಶಿವಸೇನಾ ಯುವ...

ಪುಲ್ವಾಮಾ ಉಗ್ರ ದಾಳಿ: ಮಹಾರಾಷ್ಟ್ರದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ
ಪುಲ್ವಾಮಾ ಉಗ್ರ ದಾಳಿ ಖಂಡಿಸಿ ಭಾನುವಾರ ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ಕಾಶ್ಮೀರಿಗಳ ಮೇಲೆ ಹಲ್ಲೆ ನಡೆಸುತ್ತಿರುವುದು.
Published On :
ನಾಗ್ಪುರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಮಹರಾಷ್ಟ್ರದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಶಿವಸೇನಾ ಯುವ ಘಟಕದ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.
ನಾಗ್ಪುರದ ಯವತ್ಮಾಲ್ ಕಾಲೇಜಿನ ಕಾಶ್ಮೀರದ ವಿದ್ಯಾರ್ಥಿಗಳ ಮೇಲೆ ಬುಧವಾರ ರಾತ್ರಿ ಯುವ ಸೇನಾ ಕಾರ್ಯಕರ್ತರು ದಾಳಿ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ನಡೆದ ದಾಳಿಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು, ಯುವ ಸೇನಾ ಕಾರ್ಯಕರ್ತರ ವಿರುದ್ಧ ಯವತ್ಮಾಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ.
ವೈಭವನಗರದಲ್ಲಿ ವಾಸಿಸುತ್ತಿದ್ದ ದಯಾಭಾಯಿ ಪಟೇಲ್ ದೈಹಿಕ ಶಿಕ್ಷಣ ಕಾಲೇಜ್ ನ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆದಿದೆ ಎಂದು ಯವತ್ಮಾಲ್ ಪೊಲೀಸ್ ವರಿಷ್ಠಾಧಿಕಾರಿ ಎಂ ರಾಜಕುಮಾರ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.