ದೇಶ

ಪಾಕ್ ಪರ ಹೇಳಿಕೆ: ನವಜೋತ್ ಸಿಂಗ್ ಸಿಧುಗೆ ಮತ್ತೊಂದು ಹೊಡೆತ!

ಪುಲ್ವಾಮದಲ್ಲಿ ಭಾರತೀಯ ಸಿಆರ್ ಪಿಎಫ್ ಯೋಧರ ಮೇಲೆ ಪಾಕಿಸ್ತಾನದ ಭಯೋತ್ಪಾದಕರು ದಾಳಿ ನಡೆಸಿದ ನಂತರವೂ ಪಾಕ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಬೇಕೆಂದಿದ್ದ ಮಾಜಿ ಕ್ರಿಕೆಟಿಗ, ಪಂಜಾಬ್ ಸಚಿವ

ಪಾಕ್ ಪರ ಹೇಳಿಕೆ: ನವಜೋತ್ ಸಿಂಗ್ ಸಿಧುಗೆ ಮತ್ತೊಂದು ಹೊಡೆತ!
ನವಜೋತ್ ಸಿಂಗ್ ಸಿಧು
Published On :
ನವದೆಹಲಿ: ಪುಲ್ವಾಮದಲ್ಲಿ ಭಾರತೀಯ ಸಿಆರ್ ಪಿಎಫ್ ಯೋಧರ ಮೇಲೆ ಪಾಕಿಸ್ತಾನದ ಭಯೋತ್ಪಾದಕರು ದಾಳಿ ನಡೆಸಿದ ನಂತರವೂ ಪಾಕ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಬೇಕೆಂದಿದ್ದ ಮಾಜಿ ಕ್ರಿಕೆಟಿಗ, ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧುಗೆ ಮತ್ತೊಂದು ಹೊಡೆತ ಬಿದ್ದಿದೆ. 
ನವಜೋತ್ ಸಿಂಗ್ ಸಿಧು ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಫೆಡರೇಷನ್ ಆಫ್ ವೆಸ್ಟ್ರನ್ ಇಂಡಿಯಾ ಸಿನಿ ಎಂಪ್ಲಾಯೀಸ್ ( ಎಫ್ ಡಬ್ಲ್ಯು ಐಸಿಇ)  ನವಜೋತ್ ಸಿಂಗ್ ಸಿಧುಗೆ ನಿಷೇಧ ವಿಧಿಸಿದೆ. ಫೆ.21 ರಂದು ನಡೆದ ಫೆಡರೇಷನ್ ನ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. 
ಮುಂಬೈ ಫಿಲ್ಮ್ ಸಿಟಿ ಅಥವಾ ದಾದಾಸಾಹೇಬ್ ಫಾಲ್ಕೆ ಚಿತ್ರನಗರಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಫೆಡರೇಷನ್ ನ ನಿರ್ಣಯವನ್ನು ಅಧಿಕೃತವಾಗಿ ಕಳಿಸಲಾಗಿದ್ದು, ಪಾಕಿಸ್ತಾನದ ಕಲಾವಿದರ ಜೊತೆಗೆ ನವಜೋತ್ ಸಿಂಗ್ ಸಿಧು ಅವರಿಗೂ ನಿಷೇಧ ವಿಧಿಸಿ ತಮ್ಮ ಯಾವುದೇ ಸ್ಟುಡಿಯೋಗಳಲ್ಲೂ ಸಹ ಸಿಧು ಅವರ ಚಿತ್ರೀಕರಣಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಲಾಗಿದೆ. 
ಪುಲ್ವಾಮ ದಾಳಿ ಬೆನ್ನಲ್ಲೇ ಪಾಕಿಸ್ತಾನದ ಕಲಾವಿದರಿಗೆ ಭಾರತದಲ್ಲಿ ನಿಷೇಧ ವಿಧಿಸಲಾಗಿತ್ತು. ಈ ಬೆನ್ನಲ್ಲೇ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಅವರಿಗೂ ಸಹ ನಿಷೇಧ ವಿಧಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.