ದೇಶ

ಜೈಶ್-ಇ-ಮೊಹಮ್ಮದ್ ಕಚೇರಿ ವಶಕ್ಕೆ: ಒಂದೇ ದಿನದಲ್ಲಿ ಉಲ್ಟಾ ಹೊಡೆದ ಪಾಕಿಸ್ತಾನ, ಭಾರತದ ವಿರುದ್ಧ ಆರೋಪ

40 ಸಿಆರ್ ಪಿಎಫ್ ಯೋಧರನ್ನು ಬಲಿಪಡೆದ ಪುಲ್ವಾಮಾ ಉಗ್ರ ದಾಳಿಯ ಹೊಣೆ ಹೊತ್ತಿದ್ದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಪ್ರಧಾನ ಕಚೇರಿಯನ್ನು ವಶಕ್ಕೆ ತೆಗೆದುಕೊಂಡಿರುವುದರ ಬಗ್ಗೆ ಪಾಕಿಸ್ತಾನ

ಜೈಶ್-ಇ-ಮೊಹಮ್ಮದ್ ಕಚೇರಿ ವಶಕ್ಕೆ: ಒಂದೇ ದಿನದಲ್ಲಿ ಉಲ್ಟಾ ಹೊಡೆದ ಪಾಕಿಸ್ತಾನ, ಭಾರತದ ವಿರುದ್ಧ ಆರೋಪ
ಜೈಶ್-ಇ-ಮೊಹಮ್ಮದ್ ಕಚೇರಿ ವಶಕ್ಕೆ: ಒಂದೇ ದಿನದಲ್ಲಿ ಉಲ್ಟಾ ಹೊಡೆದ ಪಾಕಿಸ್ತಾನ, ಭಾರತದ ವಿರುದ್ಧ ಆರೋಪ
Published On :
ಲಾಹೋರ್: 40 ಸಿಆರ್ ಪಿಎಫ್ ಯೋಧರನ್ನು ಬಲಿಪಡೆದ ಪುಲ್ವಾಮಾ ಉಗ್ರ ದಾಳಿಯ ಹೊಣೆ ಹೊತ್ತಿದ್ದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಪ್ರಧಾನ ಕಚೇರಿಯನ್ನು ವಶಕ್ಕೆ ತೆಗೆದುಕೊಂಡಿರುವುದರ ಬಗ್ಗೆ ಪಾಕಿಸ್ತಾನ ಸಂಪೂರ್ಣ ಉಲ್ಟಾ ಹೊಡೆದಿದೆ.
ಬಹಾವಲ್​ಪುರ್​ದಲ್ಲಿರುವ ಜೆಇಎಂ ಪ್ರಧಾನ ಕಚೇರಿಯನ್ನು ಪಂಜಾಬ್ ಸರ್ಕಾರ ವಶಕ್ಕೆ ಪಡೆದಿದೆ ಎಂದು ಪಾಕಿಸ್ತಾನ ಮಾಹಿತಿ ಸಚಿವ ಫವದ್ ಚೌಧರಿ ಅವರು ಹೇಳಿದ್ದರು. ಆದರೆ ಈಗ ಅದೇ ಸಚಿವ ಉಲ್ಟಾ ಹೊಡೆದಿದ್ದು, ನಾವು ವಶಕ್ಕೆ ಪಡೆದಿದ್ದು ಮದರಸಾವನ್ನು ಆದರೆ ಭಾರತ ಅದನ್ನು ಜೈಶ್-ಇ-ಮೊಹಮ್ಮದ್ ಸಂಘಟನೆಯ ಮುಖ್ಯ ಕಚೇರಿ ಎಂದು ಪ್ರಚಾರ ಮಾಡುತ್ತಿದೆ ಎಂದು ಭಾರತದ ವಿರುದ್ಧವೇ ಆರೋಪ ಮಾಡಿದ್ದಾರೆ. 
ಬಹಾವಲ್​ಪುರ್​ದಲ್ಲಿರುವ ಮದ್ರೆಸ್ಸಾತುಲ್ ಸಬೀರ್ ಮತ್ತು ಜಾಮಾ ಮಸ್ಜಿದ್ ಸುಭಾನಲ್ಲಾ ಸಂಸ್ಥೆಗಳನ್ನು ರಾಷ್ಟ್ರೀಯ ಕಾರ್ಯಸೂಚಿ ಯೋಜನೆಯಡಿಯಲ್ಲಿ ವಶಕ್ಕೆ ಪಡೆದುಕೊಳ್ಳಲು ರಾಷ್ಟ್ರೀಯ ಭದ್ರತಾ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ ಮದರಸಾವನ್ನು ವಶಕ್ಕೆ ಪಡೆದಿದ್ದೇವೆ, ಆದರೆ ಭಾರತ ಅದನ್ನು ಜೈಶ್-ಇ-ಮೊಹಮ್ಮದ್ ಸಂಘಟನೆಯ ಮುಖ್ಯ ಕಚೇರಿ ಎಂದು ಪ್ರಚಾರ ಮಾಡುತ್ತಿದೆ ಎಂದು ಪಾಕ್ ಸಚಿವ ಚೌಧರಿ ಆರೋಪಿಸಿದ್ದಾರೆ. 
ಆದರೆ ಫೆ.22 ರಂದು ವಶಕ್ಕೆ ಪಡೆದು ಆಡಳಿತಾಧಿಕಾರಿಯನ್ನು ನೇಮಕ ಮಾಡಿದ್ದು, ಜೈಶ್-ಇ-ಮೊಹಮ್ಮದ್ ನ ಉಗ್ರ ಸಂಘಟನೆಯ ಕಚೇರಿಯನ್ನು ಎಂದು ಪಾಕಿಸ್ತಾನದ ಸರ್ಕಾರವೇ ಅಧಿಕೃತವಾಗಿ ಹೇಳಿಕೊಂಡಿತ್ತು. ಈಗ ಮತ್ತೆ ಉಲ್ಟಾ ಹೊಡೆದಿದ್ದು ತಾನು ವಶಕ್ಕೆ ಪಡೆದಿದ್ದು ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಕಚೇರಿಯನ್ನಲ್ಲ ಎಂದು ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.