ಸೈನಿಕರ ಮಾನವ ಹಕ್ಕುಗಳ ಕುರಿತು ನಿಯಮಾವಳಿ: ಸೈನ್ಯಾಧಿಕಾರಿಗಳ ಮಕ್ಕಳ ಮನವಿ ವಿಚಾರಣೆಗೆ ಸುಪ್ರೀಂ ಅಸ್ತು
ಭದ್ರತಾ ಪಡೆ ಸಿಬ್ಬಂದಿಯ ಮಾನವ ಹಕ್ಕುಗಳ ರಕ್ಷಣೆಯನ್ನು ಕೋರಿ ಇಬ್ಬರು ಸೇನಾಧಿಕಾರಿಗಳ ಹೆಣ್ಣು ಮಕ್ಕಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿ ಸೂಚಿಸಿದೆ.

Published On :
ನವದೆಹಲಿ: ಭದ್ರತಾ ಪಡೆ ಸಿಬ್ಬಂದಿಯ ಮಾನವ ಹಕ್ಕುಗಳ ರಕ್ಷಣೆಯನ್ನು ಕೋರಿ ಇಬ್ಬರು ಸೇನಾಧಿಕಾರಿಗಳ ಹೆಣ್ಣು ಮಕ್ಕಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿ ಸೂಚಿಸಿದೆ.
ಪ್ರೀತಿ ಕೇದಾರ್ ಗೋಖೆಲೆ, ಕಾಜಲ್ ಮಿಶ್ರಾ ಅವರುಗಳು ಸಲ್ಲಿಸಿದ ಮನವಿಯಲ್ಲಿ ಭದ್ರತಾ ಸಿಬ್ಬಂದಿಗಳ ಮಾನವ ಹಕ್ಕುಗಳ ಉಲ್ಲಂಘನೆಯನ್ನು ನಿಷೇಧಿಸುವ ಕುರಿತು ನೀತಿ ನಿರೂಪಣೆ ಆಗಬೇಕೆಂದು ಕೇಳಲಾಗಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾಯಮೂರ್ತಿ ಸಂಜೀವ್ ಖನ್ನಾ ಒಳಗೊಂಡ ನ್ಯಾಯಪೀಠವು ಈ ಮನವಿ ಕೇಳಲು ಒಪ್ಪಿಕೊಂಡಿದ್ದು, ಭಾರತದ ಒಕ್ಕೂಟ, ರಕ್ಷಣಾ ಸಚಿವಾಲಯ, ಜಮ್ಮು ಮತ್ತು ಕಾಶ್ಮೀರ ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ) ಗೆ ನೋಟೀಸ್ ಜಾರಿ ಮಾಡಿದೆ.
ಸಶಸ್ತ್ರ ಪಡೆಗಳ ಸಿಬ್ಬಂದಿಗಳು ಮಾನವ ಹಕ್ಕುಗಳ ಉಲ್ಲಂಘನೆಗಳ ವಿರುದ್ಧ ಹಾಗೂ ಅಶಿಸ್ತಿನ ವೇಳೆ ಜನಸಮೂಹ ದಾಳಿ ಅಥವಾ ಏಕವ್ಯಕ್ತಿ ದಾಳಿಯಾಗುವ ಸಮಯದಲಿ ಲಿಟರಿ ಕರ್ತವ್ಯದ ಸಮಯದಲ್ಲಿ ದಾಳಿ ಮಾಡುವ ವ್ಯಕ್ತಿಗಳ ಹಕ್ಕುಗಳನ್ನು ಕಾಪಾಡುವ ಸಲುವಾಗಿ ಸಮಗ್ರ ನೀತಿಯನ್ನು ರಚಿಸುವ ಸಲುವಾಗಿ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಪ್ರೀತಿ ಹಾಗೂ ಕಾಜಲ್ ಸೂಚಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿನ ಷೋಪಿಯನ್ ನಂತಹಾ ಪ್ರದೇಶದಲ್ಲಿ ಸೈನಿಕರ ಮೇಲೆ ಕಲ್ಲು ತೂರಾಟ ನಡೆಸುವ "ಅಶಿಸ್ತಿನ ಮತ್ತು ವಿಚ್ಛಿದ್ರಕಾರಕ ಜನಸಮೂಹದ ಘಟನೆ" ಯಿಂದ ಬಹಳ ತೊಂದರೆಯಾಗುತ್ತಿದೆ.
"ಅರ್ಜಿದಾರರು ಭಾರತೀಯ ಸೈನ್ಯದ ಕಡೆಯಲ್ಲಿದ್ದು ಅವರು ಕಲ್ಲೇಟು ಹೊಡೆಯುವವರಿಂದ ಬಹಳಷ್ಟು ತೊಂದರೆ ಪಟ್ಟಿದ್ದಾರೆ.ಆದರೆ ತಮ್ಮ ಪ್ರದೇಶದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಸತತ ಪ್ರಯತ್ನದಲ್ಲಿದ್ದಾರೆ." ಮನವಿಯಲ್ಲಿ ಉಲ್ಲೇಖಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


