ವಾಯುಪಡೆ ದಾಳಿಗೆ ಸರ್ವ ಪಕ್ಷಗಳಿಂದ ಮೆಚ್ಚುಗೆ: ಸುಷ್ಮಾ ಸ್ವರಾಜ್ ಸಂತಸ
ಜೈಷ್ -ಇ- ಮೊಹಮ್ಮದ್ ಉಗ್ರರ ವಿರುದ್ಧದ ವಾಯುಪಡೆ ದಾಳಿ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕಚೇರಿಯಲ್ಲಿ ಸಚಿವೆ ಸುಷ್ಮಾ ಸ್ವರಾಜ್ ನೇತೃತ್ವದಲ್ಲಿ ನಡೆದ ಸರ್ವ ಪಕ್ಷಗಳ ಸಭೆ ಮುಕ್ತಾಯವಾಗಿದೆ.

ನವದೆಹಲಿ: ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಿಂದ ಪಾಕಿಸ್ತಾನದ ಒಳನುಗ್ಗಿ ಜೈಷ್ -ಇ- ಮೊಹಮ್ಮದ್ ಉಗ್ರರ ವಿರುದ್ಧದ ವಾಯುಪಡೆ ದಾಳಿ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕಚೇರಿಯಲ್ಲಿ ಸಚಿವೆ ಸುಷ್ಮಾ ಸ್ವರಾಜ್ ನೇತೃತ್ವದಲ್ಲಿ ನಡೆದ ಸರ್ವ ಪಕ್ಷಗಳ ಸಭೆ ಮುಕ್ತಾಯವಾಗಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಷ್ಮಾ ಸ್ವರಾಜ್, ವಾಯುಸೇನೆಯ ಕಾರ್ಯಕ್ಕೆ ಎಲ್ಲಾ ಪಕ್ಷಗಳು ಒಂದೇ ಧ್ವನಿಯಿಂದ ಮೆಚ್ಚುಗೆ ಸೂಚಿಸಿರುವುದು ಹಾಗೂ ಉಗ್ರರ ವಿರುದ್ಧದ ಸರ್ಕಾರದ ಕಾರ್ಯಾಚರಣೆಗೆ ಪ್ರೋತ್ಸಾಹ ನೀಡಿರುವುದು ಸಂತಸ ಉಂಟುಮಾಡಿದೆ ಎಂದರು.
ಬಾಲ್ ಕೋಟ್ ನಲ್ಲಿ ಜೈಷ್- ಇ- ಮೊಹಮ್ಮದ್ ಸಂಘಟನೆಯ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ವಾಯುಪಡೆ ನಡೆಸಿರುವ ದಾಳಿ ಕುರಿತು ಅಮೆರಿಕಾದ ಕಾರ್ಯದರ್ಶಿ ಮೈಕೇಲ್ ಮೈಕೆಲ್ ಪೊಂಪಿಯೋ ಅವರೊಂದಿಗೆ ಮಾತನಾಡಿರುವುದಾಗಿ ಸುಷ್ಮಾ ಸ್ವರಾಜ್ ಸರ್ವ ಪಕ್ಷಗಳ ಸಭೆಯಲ್ಲಿ ಮಾಹಿತಿ ನೀಡಿದರು.
ಕಾಂಗ್ರೆಸ್ ಮುಖಂಡ ಗುಲಾಂ ನಬಿ ಅಜಾದ್ ಮಾತನಾಡಿ, ಭಯೋತ್ಪಾದನೆ ನಿರ್ಮೂಲನೆಗೆ ನಾವು ಯಾವಾಗಲೂ ಬೆಂಬಲ ನೀಡಲಿದ್ದೇವೆ.ಸೇನಾ ಪಡೆಯ ಕಾರ್ಯ ಪ್ರಶಂಸಗೆ ಪಾತ್ರವಾಗಿದೆ. ಭಯೋತ್ಪಾದನೆ ಹಾಗೂ ಉಗ್ರರ ಶಿಬಿರಗಳನ್ನು ಗುರಿಯಾಗಿರಿಸಿಕೊಂಡು ನಡೆಸಿದ ಶುದ್ಧ ಕಾರ್ಯಾಚರಣೆಯಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


