ಕಾಂಗ್ರೆಸ್ ಅವಧಿಯಲ್ಲೂ ಆರು ಬಾರಿ ಉಗ್ರರ ವಿರುದ್ಧ ದಾಳಿ ನಡೆಸಲಾಗಿತ್ತು: ಮಲ್ಲಿಕಾರ್ಜುನ್ ಖರ್ಗೆ
ಪಾಕಿಸ್ತಾನದ ಗಡಿಯೊಳಗೆ ನುಗ್ಗಿ 350ಕ್ಕು ಹೆಚ್ಚು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ವಾಯುಪಡೆಯನ್ನು ಶ್ಲಾಘಿಸಿದ ಕಾಂಗ್ರೆಸ್ ಸಂಸದೀಯ ನಾಯಕ...

Published On :
ಕಲಬುರಗಿ: ಪಾಕಿಸ್ತಾನದ ಗಡಿಯೊಳಗೆ ನುಗ್ಗಿ 350ಕ್ಕು ಹೆಚ್ಚು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ವಾಯುಪಡೆಯನ್ನು ಶ್ಲಾಘಿಸಿದ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು, ನಾವು ಸದಾ ಸೈನಿಕರ ಬೆನ್ನಿಗಿದ್ದೇವೆ ಎಂದು ಹೇಳಿದ್ದಾರೆ.
ವಾಯುದಾಳಿಯ ಬಗ್ಗೆ ಸಂಪೂರ್ಣ ಮಾಹಿತಿ ದೊರಕಿಲ್ಲ. ಆದರೆ ಪುಲ್ವಾಮಾ ದಾಳಿಗೆ ತಿರುಗೇಟು ನೀಡುವ ಮೂಲಕ ಅಮಾಯಕ ಭಾರತೀಯರ ಮೇಲಿನ ಭಯೋತ್ಪಾದನಾ ದಾಳಿಯನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ಸೇನೆ ರವಾನಿಸಿದೆ ಎಂದು ಅವರು ಹೇಳಿದ್ದಾರೆ.
ಸರ್ಜಿಕಲ್ ದಾಳಿ ಎಂಬುದು ನಿರಂತರ ಪ್ರಕ್ರಿಯೆ. ಈ ಹಿಂದಿನ ಎಲ್ಲ ಸರ್ಕಾರಗಳ ಅವಧಿಯಲ್ಲೂ ನಡೆದಿದೆ. ಖಚಿತವಾಗಿ ಹೇಳಬೇಕೆಂದರೆ ಇಂತಹ ದಾಳಿ ನಡೆಸುವ ಬಗ್ಗೆ ಸೇನೆಯ ಉನ್ನತಾಧಿಕಾರಿ ನಿರ್ಧರಿಸುತ್ತಾರೆಯೇ ಹೊರತು ಸರ್ಕಾರವಲ್ಲ ಎಂದು ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಉಗ್ರರ ವಿರುದ್ಧ ಭಾರತೀಯ ಸೇನೆ ಕೈಗೊಂಡ ದಿಟ್ಟ ನಿರ್ಧಾರವನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿರುವ ಕಾಂಗ್ರೆಸ್, ದೇಶ ಮತ್ತು ಜನರ ರಕ್ಷಣೆಗಾಗಿ ಸೇನೆ ಕೈಗೊಳ್ಳುವ ಯಾವುದೇ ತೀರ್ಮಾನಕ್ಕೆ ಸಹಕಾರ ನೀಡುವುದಾಗಿ ಈಗಾಗಲೇ ತಿಳಿಸಿದೆ ಎಂದರು.
ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಆಡಳಿತಾವಧಿಯಲ್ಲಿ 6 ಬಾರಿ ಈ ರೀತಿಯ ದಾಳಿ ನಡೆಸಿ, ಬಾಂಗ್ಲಾದೇಶವನ್ನು ಪಾಕಿಸ್ತಾನದ ಹಿಡಿತದಿಂದ ಮುಕ್ತಗೊಳಿಸಲಾಗಿತ್ತು. ಭಾರತೀಯ ಸೇನೆಯು ಒಂದು ಲಕ್ಷಕ್ಕೂ ಅಧಿಕ ಪಾಕ್ ಸೈನಿಕರನ್ನು ಬಂಧಿಸಿತ್ತು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian ArmyMallikarjun khargeಮಲ್ಲಿಕಾರ್ಜುನ್ ಖರ್ಗೆಭಾರತೀಯ ಸೇನೆIAF strikes in Pakistanattack on terroristsಉಗ್ರರ ವಿರುದ್ಧ ದಾಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


