2015, 2016, 2017 ಮತ್ತು 2018ನೇ ಸಾಲಿನ ಗಾಂಧಿ ಶಾಂತಿ ಪ್ರಶಸ್ತಿ ಪ್ರದಾನ
2015, 2016, 2017 ಮತ್ತು 18ನೇ ಸಾಲಿನ ಗಾಂಧಿ ಶಾಂತಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

Published On :
ನವದೆಹಲಿ: 2015, 2016, 2017 ಮತ್ತು 18ನೇ ಸಾಲಿನ ಗಾಂಧಿ ಶಾಂತಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಕನ್ಯಾಕುಮಾರಿಯ ವಿವೇಕಾನಂದ ಕೇಂದ್ರ 2015ನೇ ಸಾಲಿನ ಹಾಗೂ ಅಕ್ಷಯ ಪಾತ್ರಾ ಫೌಂಡೇಶನ್ ಮತ್ತು ಸುಲಭ್ ಇಂಟರ್ ನ್ಯಾಷನಲ್ ಸಂಸ್ಥೆಗಳು ಜಂಟಿಯಾಗಿ 2016ನೇ ಸಾಲಿನ ಪ್ರಶಸ್ತಿ ಸ್ವೀಕರಿಸಿದವು.ಏಕಲ್ ಅಭಿಯಾನ ಟ್ರಸ್ಟ್ 2017ನೇ ಸಾಲಿನ ಪ್ರಶಸ್ತಿ ಹಾಗೂ ಯೋಹಿ ಸಸಾಕಾವಾ 2018ನೇ ಗಾಂಧಿ ಶಾಂತಿ ಪ್ರಶಸ್ತಿ ಮುಡಿಗೇರಿಸಿಕೊಂಡರು.
ಈ ಹಿಂದೆ ತಾಂಜೇನಿಯಾದ ಮಾಜಿ ಅಧ್ಯಕ್ಷ ಡಾ. ಜೂಲಿಯಸ್ ಕೆ. ನ್ಯೆರೆರೆ, ಶ್ರೀಲಂಕಾದ ಸರ್ವೋದಯ ಮೂವ್‍ಮೆಂಟ್‍ನ ಸಂಸ್ಥಾಪಕ ಅಧ್ಯಕ್ಷ ಡಾ. ಎ.ಟಿ. ಅರಿಯರತ್ನೆ, ರಾಮ ಕೃಷ್ಣ ಮಿಷನ್, ಬಾಬಾ ಆಮ್ಟೆ (ಮುರಳೀಧರ್ ದೇವಿದಾಸ್ ಆಮ್ಟೆ), ಡಾ. ನೆಲ್ಸನ್ ಮಂಡೇಲಾ ಮತ್ತು ಬಾಂಗ್ಲಾದೇಶದ ಗ್ರಾಮೀಣ ಬ್ಯಾಂಕ್ (ಜಂಟಿಯಾಗಿ), ಭಾರತೀಯ ವಿದ್ಯಾ ಭವನ, ಆರ್ಚ್ ಬಿಷಪ್ ಡೆಸ್ಮಂಡ್ ಟುಟು, ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗಳು ಪ್ರಶಸ್ತಿಗೆ ಭಾಜನವಾಗಿವೆ.
ಈ ಪ್ರಶಸ್ತಿಯನ್ನು 2004, 2006, 2007, 2008, 2009, 2010, 2011 ಮತ್ತು 2012 ರವರೆಗೆ ನೀಡಲಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PM Modiಪ್ರಧಾನಿ ಮೋದಿGandhi Peace PrizePresident Kovindರಾಷ್ಟ್ರಪತಿ ಕೋವಿಂದ್Presented Award ಗಾಂಧಿ ಶಾಂತಿ ಪ್ರಶಸ್ತಿಪ್ರಶಸ್ತಿ ಪ್ರದಾನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


