ದೇಶ

ಪುಲ್ವಾಮ ಉಗ್ರದಾಳಿ ಎಫೆಕ್ಟ್: ಎಚ್ಛೆತ್ತ ನವಜೋತ್ ಸಿಂಗ್ ಸಿಧು ವಾಯುದಾಳಿ ಕುರಿತು ಹೇಳಿದ್ದೇನು ಗೊತ್ತಾ?

ಪುಲ್ವಾಮ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಬೆನ್ನಿಗೆ ನಿಂತಿದ್ದ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಈಗ ಎಚ್ಚೆತ್ತುಕೊಂಡಿದ್ದು, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ವಾಯುಸೇನೆ ನಡೆಸಿದ ವಾಯುದಾಳಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ಪುಲ್ವಾಮ ಉಗ್ರದಾಳಿ ಎಫೆಕ್ಟ್: ಎಚ್ಛೆತ್ತ ನವಜೋತ್ ಸಿಂಗ್ ಸಿಧು ವಾಯುದಾಳಿ ಕುರಿತು ಹೇಳಿದ್ದೇನು ಗೊತ್ತಾ?
ಸಂಗ್ರಹ ಚಿತ್ರ
Published On :
ನವದೆಹಲಿ: ಪುಲ್ವಾಮ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಬೆನ್ನಿಗೆ ನಿಂತಿದ್ದ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಈಗ ಎಚ್ಚೆತ್ತುಕೊಂಡಿದ್ದು, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ವಾಯುಸೇನೆ ನಡೆಸಿದ ವಾಯುದಾಳಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ಪುಲ್ವಾಮ ಉಗ್ರ ದಾಳಿಗೆ ಪ್ರತೀಕಾರವಾಗಿ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಪಾಕ್​ನ ಬಾಲಾಕೋಟ್ ನಲ್ಲಿರುವ ಜೈಷ್​ ಇ ಮೊಹಮ್ಮದ್​ ಉಗ್ರ ಸಂಘಟನೆಯ ಉಗ್ರರ ಅಡುಗುತಾಣಗಳ ಮೇಲೆ ವೈಮಾನಿಕ ದಾಳಿ ಮಾಡಿದ ಭಾರತೀಯ ಸೇನೆಯ ದಿಟ್ಟತನವನ್ನು ಮಾಜಿ ಕ್ರಿಕೆಟಿಗ ಹಾಗೂ ಪಂಜಾಬ್​ ಸಚಿವ ನವಜೋತ್ ಸಿಂಗ್​ ಸಿಧು ಅವರು ಶ್ಲಾಘಿಸಿದ್ದಾರೆ.
ಭಾರತದ ವೈಮಾನಿಕ ದಾಳಿಯ ಬಗ್ಗೆ ಹಿಂದಿಯಲ್ಲಿ ಟ್ವೀಟ್​ ಮಾಡಿರುವ ನವಜೋತ್ ಸಿಂಗ್​ ಸಿಧು, 'ಕಬ್ಬಿಣವನ್ನು ಕಬ್ಬಿಣದಿಂದಲೇ ಕತ್ತರಿಸಬೇಕು. ಬೆಂಕಿಯನ್ನು ಬೆಂಕಿಯಿಂದಲೇ ನಂದಿಸಬೇಕು. ಹಾವು ಕಡಿತಕ್ಕೆ ವಿಷವೇ ಔಷಧಿ ಎನ್ನುವ ಹಾಗೇ ಉಗ್ರತ್ವಕ್ಕೆ ದಾಳಿಯಿಂದಲೇ ಉತ್ತರ ನೀಡಬೇಕು ಎಂದು ಸೇನೆಯ ಸಾಮರ್ಥ್ಯವನ್ನು ಶ್ಲಾಘಿಸಿದ್ದಾರೆ.
ಈ ಮೊದಲು ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಮಾತಾನಾಡಿದ್ದ ಸಿಧು, ಇಡೀ ಪಾಕಿಸ್ತಾನವನ್ನು ದೂಷಿಸಬೇಡಿ ಎಂದು ಹೇಳಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದರು. ಅಲ್ಲದೆ, ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಅವರ ಬೆನ್ನಿಗೆ ನಿಂತು ಈ ವಿಚಾರದಲ್ಲಿ ಶಾಂತಿ ಮಾತುಕತೆ ನಡೆಸಿದರೆ ಉತ್ತಮ ಎಂದು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.