ದೇಶ

ಪಾಕ್ ನ ಎಫ್-16 ಯುದ್ಧ ವಿಮಾನ ಹೊಡೆದುರುಳಿಸಿದ ಐಎಎಫ್, ಭಾರತದ ಓರ್ವ ಪೈಲಟ್ ನಾಪತ್ತೆ: ಎಂಇಎ

ಪಾಕಿಸ್ತಾನದ ವೈಮಾನಿಕ ದಾಳಿಯನ್ನು ಭಾರತ ವಿಫಲಗೊಳಿಸಿದೆ. ಭಾರತದ ಗಡಿ ಉಲ್ಲಂಘಿಸಿದ್ದ ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಭಾರತೀಯ...

ಪಾಕ್ ನ ಎಫ್-16 ಯುದ್ಧ ವಿಮಾನ ಹೊಡೆದುರುಳಿಸಿದ ಐಎಎಫ್, ಭಾರತದ ಓರ್ವ ಪೈಲಟ್ ನಾಪತ್ತೆ: ಎಂಇಎ
ರವೀಶ್ ಕುಮಾರ್
Published On :
ನವದೆಹಲಿ: ಪಾಕಿಸ್ತಾನದ ವೈಮಾನಿಕ ದಾಳಿಯನ್ನು ಭಾರತ ವಿಫಲಗೊಳಿಸಿದೆ.  ಭಾರತದ ಗಡಿ ಉಲ್ಲಂಘಿಸಿದ್ದ ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಭಾರತೀಯ ವಾಯುಪಡೆ ಹೊಡೆದುರುಳಿಸಿದೆ ಎಂದು ಬುಧವಾರ ವಿದೇಶಾಂಗ ಸಚಿವಾಲಯ ಖಚಿತಪಡಿಸಿದೆ.
ಉಭಯ ದೇಶಗಳ ನಡುವೆ ಯುದ್ಧ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು, ಭಾರತದ ವಾಯು ಗಡಿ ಉಲ್ಲಂಘಿಸಿದ ಪಾಕ್ ನ ಒಂದು ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದೇವೆ. ಕಾರ್ಯಾಚರಣೆ ವೇಳೆ ನಮ್ಮ ಮಿಗ್ -21 ವಿಮಾನ ಪತನವಾಗಿದ್ದು, ಓರ್ವ ಪೈಲಟ್ ನಾಪತ್ತೆಯಾಗಿದ್ದಾರೆ. ಆ ಪೈಲಟ್ ನಮ್ಮ ವಶದಲ್ಲಿದ್ದಾರೆ ಎಂದು ಪಾಕ್ ಹೇಳಿದೆ. ಆದರೆ ಈ ಬಗ್ಗೆ ಪರಿಶೀಲಿಸಬೇಕಿದೆ ಎಂದರು.
ಪಾಕಿಸ್ತಾನ ಇಂದು ನಮ್ಮನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಅದಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಅವರು ತಿಳಿಸಿದ್ದಾರೆ.
ಜೈಶ್ -ಇ- ಮೊಹಮದ್ ಉಗ್ರ ಸಂಘಟನೆ ನೆಲೆಗಳ ಮೇಲೆ ವೈಮಾನಿಕ ದಾಳಿ ಹಿನ್ನೆಲೆಯಲ್ಲಿ, ಇಂದು ಬೆಳಗ್ಗೆ ಪಾಕ್ ವಾಯುಪಡೆ ಭಾರತದ ಗಡಿ ಉಲ್ಲಂಘಿಸಿದ್ದು, ಭಾರತೀಯ ವಾಯುಪಡೆ ಗಸ್ತು ವಿಮಾನಗಳು ಹಿಮ್ಮೆಟ್ಟಿಸಿವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.