ವೈಮಾನಿಕ ದಾಳಿ ನಂತರ ಭಾರತವನ್ನು ಕುಖ್ಯಾತಗೊಳಿಸಲು ಪಾಕ್ ಯತ್ನ: ರಾಜನಾಥ್ ಸಿಂಗ್
ಭಾರತೀಯ ವಾಯು ಪಡೆ ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಉಗ್ರ ಶಿಬಿರಗಳ ಮೇಲೆ ದಾಳಿ ನಡೆಸಿದ ನಂತರ ಪಾಕಿಸ್ತಾನ ಭಾರತವನ್ನು ಕುಖ್ಯಾತಗೊಳಿಸಲು....

Published On :
ಬಿಲಾಸ್ಪುರ್: ಭಾರತೀಯ ವಾಯು ಪಡೆ ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಉಗ್ರ ಶಿಬಿರಗಳ ಮೇಲೆ ದಾಳಿ ನಡೆಸಿದ ನಂತರ ಪಾಕಿಸ್ತಾನ ಭಾರತವನ್ನು ಕುಖ್ಯಾತಗೊಳಿಸಲು ಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ.
ಇಂದು ಛತ್ತೀಸ್ ಗಢದ ಬಿಲಾಸ್ಪುರ್ ದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್, ಭಾರತೀಯ ವಾಯುಪಡೆ ಉಗ್ರ ಶಿಬಿರಗಳನ್ನು ಬಹಳ ಎಚ್ಚರಿಕೆಯಿಂದ, ಯಾವುದೇ ನಾಗರಿಕರ ಜೀವ ಹಾನಿಗೆ ಆಸ್ಪದ ನೀಡದೆ ನಡೆಸಿದೆ. ಆದರೂ ಪಾಕ್, ಭಾರತವನ್ನು ಕುಖ್ಯಾತಗೊಳಿಸಿಲು ಯತ್ನಿಸುತ್ತಿದೆ ಎಂದರುಯ
ಪಾಕಿಸ್ತಾನಕ್ಕೆ ಭಾರತ ಅತ್ಯಂತ ಪರಿಣಾಮಕಾರಿ ಹಾಗೂ ತಕ್ಕುದಾದ ಉತ್ತರವನ್ನು ನೀಡಿದೆ ಎಂದ ಸಿಂಗ್, ಕಾಶ್ಮೀರ ಯಾವತ್ತೂ ಭಾರತದ ಅವಿಭಾಜ್ಯ ಅಂಗವಾಗಿರುವುದಲ್ಲದೆ ಅದನ್ನು ವಿಶ್ವದ ಯಾವುದೇ ಶಕ್ತಿ ಭಾರತದಿಂದ ಬೇರ್ಪಡಿಸಲು ಸಾಧ್ಯವಿಲ್ಲ ಎಂದರು.
ಭಾರತವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವ ಪಾಕಿಸ್ತಾನಕ್ಕೆ ಎರಡು ದಿನಗಳ ಹಿಂದೆ ಅತ್ಯಂತ ಪ್ರಬಲ ಉತ್ತರ ನೀಡಿದ್ದೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


