ಭಾರತದ ವಾಯುಗಡಿ ಉಲ್ಲಂಘಿಸಿದ ಪಾಕಿಸ್ತಾನದಿಂದ ಗಡಿಯಲ್ಲಿ ಬಾಂಬ್ ದಾಳಿ ವರದಿ!
ಭಾರತೀಯ ವಾಯು ಪಡೆ ಪಾಕಿಸ್ತಾನಕ್ಕೆ ನುಗ್ಗಿ ಭಯೋತ್ಪಾದಕರ ಕ್ಯಾಂಪ್ ಗಳ ಮೇಲೆ ವೈಮಾನಿಕ ದಾಳಿ ನಡೆಸಿದ ಮರುದಿನ ಪಾಕಿಸ್ತಾನದ ಸೇನೆ ಭಾರತೀಯ ಯೋಧರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು

Published On :
ನವದೆಹಲಿ: ಭಾರತೀಯ ವಾಯು ಪಡೆ ಪಾಕಿಸ್ತಾನಕ್ಕೆ ನುಗ್ಗಿ ಭಯೋತ್ಪಾದಕರ ಕ್ಯಾಂಪ್ ಗಳ ಮೇಲೆ ವೈಮಾನಿಕ ದಾಳಿ ನಡೆಸಿದ ಮರುದಿನ ಪಾಕಿಸ್ತಾನದ ಸೇನೆ ಭಾರತೀಯ ಯೋಧರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಯತ್ನಿಸಿದೆ.
ಫೆ.27 ರಂದು ಬೆಳಿಗ್ಗೆ ಜಮ್ಮು-ಕಾಶ್ಮೀರದ ರಜೌರಿ ಹಾಗೂ ನೌಶೇರಾಗಳಲ್ಲಿ ವಾಯುಗಡಿಯನ್ನು ಉಲ್ಲಂಘನೆ ಮಾಡಿದ್ದು ಬಾಂಬ್ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಪಾಕಿಸ್ತಾನದ ಉಗ್ರರು ಭಾರತದ ವಿಮಾನಗಳನ್ನು ಹೈಜಾಕ್ ಮಾಡುವ ಸಾಧ್ಯತೆ ಇರುವುದರಿಂದ ಜಮ್ಮು-ಕಾಶ್ಮೀರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಶ್ರೀನಗರ, ಲೆಹ್, ಪಠಾಣ್ ಕೋಟ್ ಗಳಲ್ಲಿಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪಾಕಿಸ್ತಾನviolationವಾಯುಗಡಿ ಉಲ್ಲಂಘನೆIAF strikes in PakistanPakistani jetsIndian air spaceಭಾರತ ವೈಮಾನಿಕ ದಾಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


