ಅಭಿನಂದನ್‌ಗೆ ತೊಂದರೆಯಾದರೆ ಮತ್ತೆ ದಾಳಿ ನಡೆಸುತ್ತೇವೆ: ಪಾಕ್‍ಗೆ ಭಾರತ ವಾರ್ನಿಂಗ್!
ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ರನ್ನು ಶೀಘ್ರವೇ ಬಿಡುಗಡೆ ಮಾಡಬೇಕು. ಅವರಿಗೆ ತೊಂದರೆಯಾದರೆ ದಾಳಿ ನಡೆಸುತ್ತೇವೆ ಎಂದು ಪಾಕಿಸ್ತಾನಕ್ಕೆ ಭಾರತ ಖಡಕ್ ವಾರ್ನಿಂಗ್ ಕೊಟ್ಟಿದೆ.

Published On :
ನವದೆಹಲಿ: ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ರನ್ನು ಶೀಘ್ರವೇ ಬಿಡುಗಡೆ ಮಾಡಬೇಕು. ಅವರಿಗೆ ತೊಂದರೆಯಾದರೆ ದಾಳಿ ನಡೆಸುತ್ತೇವೆ ಎಂದು ಪಾಕಿಸ್ತಾನಕ್ಕೆ ಭಾರತ ಖಡಕ್ ವಾರ್ನಿಂಗ್ ಕೊಟ್ಟಿದೆ.
ಪ್ರಧಾನಿ ನರೇಂದ್ರ ಮೋದಿ ಜತೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಾತುಕತೆಗೆ ಸಿದ್ಧರಾಗಿದ್ದಾರೆ. ಮಾತುಕತೆಗೆ ಮುಂದಾದರೆ ನಾನು ಅಭಿನಂದನ್ ರನ್ನು ಬಿಡುಗಡೆ ಮಾಡುತ್ತೇವೆ ಎಂದು ಪಾಕ್ ವಿದೇಶಾಂಗ ಸಚಿವ ಮೊಹಮ್ಮದ್ ಖುರೇಷಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಭಾರತೀಯ ವಿದೇಶಾಂಗ ಸಚಿವಾಲಯ ಕೂಡಲೇ ಭಾರತೀಯ ಪೈಲಟ್ ರನ್ನು ವಾಪಸ್ ಕಳುಹಿಸಿಕೊಡಬೇಕು. ಇನ್ನು ಪೈಲಟ್ ಬಿಡುಗಡೆಗೆ ಯಾವುದೇ ಷರತ್ತಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.
ಒಂದು ವೇಳೆ ನಮ್ಮ ಪೈಲಟ್ ಗೆ ಏನಾದರೂ ತೊಂದರೆ ಆದರೆ ನಾವು ದಾಳಿ ಮಾಡಲು ಸಿದ್ಧ. ಇನ್ನು ಪಾಕಿಸ್ತಾನ ಉಗ್ರರ ರಕ್ಷಣೆ ಮಾಡುತ್ತಿದೆ. ಕೂಡಲೇ
ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಂಡರೆ ಮಾತ್ರ ಪಾಕ್ ಜೊತೆ ಮಾತುಕತೆಗೆ ನಾವು ಸಿದ್ಧ ಎಂದು ಎಂಇಎ ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತPakistanಪಾಕಿಸ್ತಾನIndian Air Forceಭಾರತೀಯ ವಾಯುಸೇನೆIAF Air strikes in PakistanIAF pilotಐಎಎಫ್ ಪೈಲಟ್Abhinandanಅಭಿನಂದನ್ ವರ್ತಮಾನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


