ಭಯೋತ್ಪಾದನೆ ಸೇರಿದಂತೆ ಎಲ್ಲ ವಿಷಯಗಳ ಕುರಿತು ಮಾತುಕತೆಗೆ ಸಿದ್ಧ: ಪಾಕ್ ಪ್ರಧಾನಿ
ಭಯೋತ್ಪಾದನೆ ಸೇರಿದಂತೆ ಎಲ್ಲ ವಿಷಯಗಳ ಕುರಿತು ಭಾರತದೊಂದಿಗೆ ಮಾತುಕತೆಗೆ ಪಾಕಿಸ್ತಾನ ಸಿದ್ಧವಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು...

Published On :
ಇಸ್ಲಾಮಾಬಾದ್: ಭಯೋತ್ಪಾದನೆ ಸೇರಿದಂತೆ ಎಲ್ಲ ವಿಷಯಗಳ ಕುರಿತು ಭಾರತದೊಂದಿಗೆ ಮಾತುಕತೆಗೆ ಪಾಕಿಸ್ತಾನ ಸಿದ್ಧವಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಗುರುವಾರ ಹೇಳಿದ್ದಾರೆ.
ಎರಡು ಪ್ರಾದೇಶಿಕ ಪ್ರದೇಶದಲ್ಲಿ ಸ್ಥಿರತೆ ಹಾಗೂ ಶಾಂತಿ ಸ್ಥಾಪಿಸಲು ಇರುವ ಏಕೈಕ ಮಾರ್ಗ ಮಾತುಕತೆ ಎಂದು ಪಾಕ್ ಪ್ರಧಾನಿ ಹೇಳಿದ್ದಾರೆ.
ಪುಲ್ವಾಮ ಉಗ್ರ ದಾಳಿ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿ ನೀಡುವಂತೆ ಭಾರತಕ್ಕೆ ಈಗಾಗಲೇ ತಿಳಿಸಿದ್ದೇನೆ. ಹಾಗೇ, ದ್ವಿಪಕ್ಷೀಯ ಸಂಬಂಧಗಳ ಕುರಿತು ಭಾರತದೊಂದಿಗೆ ಚರ್ಚಿಸಲು ಸಿದ್ಧ ಎಂದು ಇಮ್ರಾನ್ ಖಾನ್ ಸಂಪುಟ ಸಭೆಯಲ್ಲಿ ತಿಳಿಸಿದರು ಎಂದು ಮೂಲಗಳು ತಿಳಿಸಿವೆ.
ಪಾಕಿಸ್ತಾನ ಹಾಗೂ ಭಾರತ ನಡುವೆ ಉಂಟಾಗಿರುವ ಇಂತಹ ಉದ್ವಿಗ್ನ ಸ್ಥಿತಿಯಲ್ಲಿ ಯಾವ ರೀತಿಯ ಕಾರ್ಯಾಚರಣೆ ನಡೆಸಬಹುದು ಎಂಬ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


