ಅಭಿನಂದನ್ ಬಿಡುಗಡೆ, ಸೌಹಾರ್ದತೆಯ ಸೂಚನೆ: ಪಂಜಾಬ್ ಸಿಎಂ
ಅಭಿನಂದನ್ ಬಿಡುಗಡೆ ಮಾಡುವುದು ಸೌಹಾರ್ದತೆಯ ಸೂಚನೆಯಾಗಿದ್ದು, ಉಭಯ ರಾಷ್ಟ್ರಗಳ ನಡುವೆ ಉಂಟಾಗಿರುವ ಬಿಕ್ಕಟ್ಟು ಅಂತ್ಯಗೊಳ್ಳುವ ವಿಶ್ವಾಸ ಇರುವುದಾಗಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

Published On :
ಅಮೃತಸರ: ಭಾರತದ ಹೆಮ್ಮೆಯ ಪುತ್ರ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ಬಿಡುಗಡೆ ಮಾಡುವ ಪಾಕಿಸ್ತಾನದ ಹೇಳಿಕೆ ದೇಶಾದ್ಯಂತ ಸಂಭ್ರಮಕ್ಕೆ ಕಾರಣವಾಗಿದೆ.
ಅಭಿನಂದನ್ ಅವರನ್ನು ನಾಳೆ ಬಿಡುಗಡೆ ಮಾಡುವುದಾಗಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳುತ್ತಿದ್ದಂತೆ ಇತ್ತ ಭಾರತದಲ್ಲಿ ಯುದ್ದದಲ್ಲಿ ಗೆದ್ದ ಸಂಭ್ರಮವೇ ಆವರಿಸಿದೆ. ಅಭಿನಂದನ್ ಪರ ಘೋಷಣೆಗಳು ಮುಗಿಲು ಮಟ್ಟಿವೆ.
ಈ ಮಧ್ಯೆ ಅಭಿನಂದನ್ ವರ್ತಮಾನ್ ನಾಳೆ ಬಿಡುಗಡೆ ಮಾಡುವುದಾಗಿ ಪಾಕಿಸ್ತಾನ ಹೇಳಿಕೆ ನೀಡಿರುವುದರಿಂದ ತಾವೂ ಸಂತಸಗೊಂಡಿರುವುದಾಗಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PunjabChief Minister Captain Amarinder SinghAbhinandan Release ಪಂಜಾಬ್ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ಅಭಿನಂದನ್ ಬಿಡುಗಡೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


