ದೇಶ

ಉತ್ತರ ಪ್ರದೇಶ: ಪೊಲೀಸರ ಕಾರ್ಯಾಚರಣೆ, ಅಕ್ರಮ ಶಸಾಸ್ತ್ರ ಹೊಂದಿದ್ದ 42 ಜನರ ಬಂಧನ

ಉತ್ತರ ಪ್ರದೇಶದ ಮುಜಾಫರ್ ನಗರದ ವಿವಿಧೆಡೆ ನಡೆಸಿದ ಕಾರ್ಯಾಚರಣೆ ವೇಳೆಯಲ್ಲಿ ಅಕ್ರಮವಾಗಿ ಶಸಾಸ್ತ್ರ ಹೊಂದಿದ್ದ 42ಕ್ಕೂ ಅಧಿಕ ಮಂದಿಯನ್ನು ಬಂಧಿಸಿರುವುದಾಗಿ ಪೊಲೀಸರು ಇಂದು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಪೊಲೀಸರ ಕಾರ್ಯಾಚರಣೆ, ಅಕ್ರಮ ಶಸಾಸ್ತ್ರ ಹೊಂದಿದ್ದ 42 ಜನರ ಬಂಧನ
ಸಾಂದರ್ಭಿಕ ಚಿತ್ರ
Published On :

ಮುಜಾಫರ್ ನಗರ:  ಉತ್ತರ ಪ್ರದೇಶದ ಮುಜಾಫರ್ ನಗರದ ವಿವಿಧೆಡೆ ನಡೆಸಿದ ಕಾರ್ಯಾಚರಣೆ ವೇಳೆಯಲ್ಲಿ  ಅಕ್ರಮವಾಗಿ  ಶಸಾಸ್ತ್ರ  ಹೊಂದಿದ್ದ 42ಕ್ಕೂ ಅಧಿಕ ಮಂದಿಯನ್ನು ಬಂಧಿಸಿರುವುದಾಗಿ ಪೊಲೀಸರು ಇಂದು ತಿಳಿಸಿದ್ದಾರೆ.

ಅಕ್ರಮವಾಗಿ ಶಸಾಸ್ತ್ರ ತಯಾರಿಸುತ್ತಿದ್ದ ಘಟಕಗಳ ಮೇಲೆ ದಾಳಿ ನಡೆಸಲಾಗಿದ್ದು, ಬೃಹತ್ ಪ್ರಮಾಣದ ಶಸಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.ದಾಳಿ ವೇಳೆಯಲ್ಲಿ ಅಧಿಕ ಪ್ರಮಾಣದ ದೇಶಿ ನಿರ್ಮಿತ ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ ಎಸ್ ಪಿ ಸುದೀರ್ ಕುಮಾರ್  ತಿಳಿಸಿದ್ದಾರೆ

ಜಿಲ್ಲೆಯ ಕಾತೊಳಿ ಪಟ್ಟಣದಲ್ಲಿನ ಮನೆಯೊಂದರ ಮೇಲೆ ದಾಳಿ ನಡೆಸಲಾಗಿದ್ದು, ಒಬ್ಬನನ್ನು  ಬಂಧಿಕ ಶಸಾಸ್ತ್ರಗಳನ್ನು ವಶಕ್ಕೆ ಪಡೆದಿರುವುದಾಗಿ ಎಸ್ಪಿ ಒಂಬಿರ್ ಸಿಂಗ್ ಹೇಳಿದ್ದಾರೆ.

ಬುದ್ವಾನಾ ಠಾಣೆ ವ್ಯಾಪ್ತಿಯ ಜೊಲ್ಲಾ ಹಳ್ಳಿಯಲ್ಲಿ ಅಕ್ರಮವಾಗಿ ಶಸಾಸ್ತ್ರ ತಯಾರಿಕೆ ಘಟಕದ ಮೇಲೆ ದಾಳಿ ನಡೆಸಲಾಗಿದ್ದು, ಅಪಾರ ಪ್ರಮಾಣದಲ್ಲಿ ಶಸಾಸ್ತ್ರ ಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ  ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.