ಅರುಣ್ ಜೇಟ್ಲಿ ಸವಾಲಿಗೆ ನಾವು ಸಿದ್ಧ, ಸಮಯ ನಿಗದಿ ಮಾಡಿ ಎಂದ ಮಲ್ಲಿಕಾರ್ಜುನ ಖರ್ಗೆ
ರಾಫೆಲ್ ಯುದ್ದ ವಿಮಾನ ಖರೀದಿ ವಿವಾದ ಸಂಬಂಧ ಕೇಂದ್ರ ಸಚಿವ ಅರುಣ್ ಜೇಟ್ಲಿ ಹಾಕಿರುವ ಸವಾಲಿಗೆ ನಾವು ಸಿದ್ಧರಿದ್ದು, ಚರ್ಚೆಗೆ ನೀವೆ ಸಮಯ ನಿಗದಿ ಮಾಡಿ ಎಂದು ಕಾಂಗ್ರೆಸ್ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Published On :
ನವದೆಹಲಿ: ರಾಫೆಲ್ ಯುದ್ದ ವಿಮಾನ ಖರೀದಿ ವಿವಾದ ಸಂಬಂಧ ಕೇಂದ್ರ ಸಚಿವ ಅರುಣ್ ಜೇಟ್ಲಿ ಹಾಕಿರುವ ಸವಾಲಿಗೆ ನಾವು ಸಿದ್ಧರಿದ್ದು, ಚರ್ಚೆಗೆ ನೀವೆ ಸಮಯ ನಿಗದಿ ಮಾಡಿ ಎಂದು ಕಾಂಗ್ರೆಸ್ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ರಾಫೆಲ್ ಒಪ್ಪಂದದ ಕುರಿತು ಸೋಮವಾರ ಲೋಕಸಭೆಯಲ್ಲಿ ಕಾವೇರಿದ ಚರ್ಚೆ ನಡೆದಿದೆ. ರಫೇಲ್ ಕುರಿತ ಚರ್ಚೆಗೆ ಬನ್ನಿ, ಓಡಿಹೋಗಬೇಡಿ ಎಂಬ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಸವಾಲು ಸ್ವೀಕರಿಸಿದ ಪ್ರತಿ ಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, 'ಚರ್ಚೆಗೆ ನಾವು ಸಿದ್ಧ. ಜನವರಿ 2ರಂದು ಸಮಯ ನಿಗದಿ ಮಾಡಿ,' ಎಂದು ಹೇಳಿದ್ದಾರೆ.
'ಜೇಟ್ಲಿ ಜೀ ನಮಗೆ ಸವಾಲೆಸೆದಿದ್ದಾರೆ. ನಾವು ಒಪ್ಪಿಕೊಂಡಿದ್ದೇವೆ. ಜನವರಿ 2 ರಂದು ಚರ್ಚೆ ಮಾಡಲು ನಾವು ಸಿದ್ಧರಿದ್ದೇವೆ. ದಯವಿಟ್ಟು ಸಮಯ ನಿಗದಿ ಮಾಡಿ ಎಂದು ಖರ್ಗೆ ಹೇಳಿದ್ದಾರೆ.
ಈ ಹಿಂದೆ ಖರ್ಗೆ ಅಂತೆಯೇ ರಾಫೆಲ್ ಒಪ್ಪಂದದ ತನಿಖೆಯನ್ನು ಜಂಟಿ ಸಂಸದೀಯ ಸಮಿತಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದರು. ಇದಕ್ಕೆ ಪ್ರತಿಯಾಗಿ ಸಚಿವ ಜೇಟ್ಲಿ, ರಾಫೆಲ್ ಬಗ್ಗೆ ಚರ್ಚೆ ಆರಂಭಿಸಿ, ನಾವು ಉತ್ತರಕ್ಕೆ ಸಿದ್ಧರಿದ್ದೇವೆ. ಕಾಂಗ್ರೆಸ್ ಸುಳ್ಳು ಪ್ರಚಾರದಲ್ಲಿ ತೊಡಗಿದೆ ಎಂದು ನಿರೂಪಿಸುತ್ತೇವೆ,' ಎಂದು ಜೇಟ್ಲಿ ಸವಾಲು ಎಸೆದರು. ಆಗ ಖರ್ಗೆ ಅವರು ಸವಾಲು ಒಪ್ಪಿರುವುದಾಗಿ ತಿಳಿಸಿದರು.
ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಮತ್ತು ವಿಪಕ್ಷ ಸಂಸದರು ಸ್ಪೀಕರ್ ಸುಮಿತ್ರಾ ಮಹಾಜನ್ ಎದುರು ರಾಫೆಲ್ ತನಿಖೆ ಕುರಿತು ಪ್ರತಿಭಟನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Arun Jaitleyಅರುಣ್ ಜೇಟ್ಲಿನವದೆಹಲಿCongressಕಾಂಗ್ರೆಸ್New DelhibjpMallikarjun khargeಮಲ್ಲಿಕಾರ್ಜುನ ಖರ್ಗೆRafale dealರಾಫೆಲ್ ಒಪ್ಪಂದ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


