ಉತ್ತರ ಪ್ರದೇಶ: ಜಾನುವಾರು ಸಾಗಿಸುತ್ತಿದ್ದ ಟ್ರಕ್ ಗುಡಿಸಲಿಗೆ ನುಗ್ಗಿ ಏಳು ಮಂದಿ ದುರ್ಮರಣ
ಉತ್ತರ ಪ್ರದೇಶದ ಚಾಂದೌಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ವೊಂದು ಗುಡಿಸಲಿಗೆ ನುಗ್ಗಿದ ಪರಿಣಾಮ ಇಬ್ಬರು ಮಹಿಳೆಯರು, ನಾಲ್ವರು ಮಕ್ಕಳು ಸೇರಿದಂತೆ ಸ್ಥಳದಲ್ಲಿಯೇ ಏಳು ಮಂದಿ ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ನಡೆದಿದೆ.

ಲಖನೌ: ಉತ್ತರ ಪ್ರದೇಶದ ಚಾಂದೌಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ವೊಂದು ಗುಡಿಸಲಿಗೆ ನುಗ್ಗಿದ ಪರಿಣಾಮ ಇಬ್ಬರು ಮಹಿಳೆಯರು, ನಾಲ್ವರು ಮಕ್ಕಳು ಸೇರಿದಂತೆ ಸ್ಥಳದಲ್ಲಿಯೇ ಏಳು ಮಂದಿ ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ಈ ಮಧ್ಯೆ ನಿರ್ಲಕ್ಷ್ಯದ ಕಾರಣ ಸ್ಥಳೀಯ ಪೊಲೀಸ್ ಠಾಣೆಯ ಮೂವರು ಪೊಲೀಸರು ಹಾಗೂ ಒಬ್ಬ ಇನ್ಸ್ ಪೆಕ್ಟರ್ ನನ್ನು ಸೇವೆಯಿಂದ ಅಮಾನತುಗೊಳಿಸಿದೆ.
ಇಂದು ಮುಂಜಾನೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ವೊಂದನ್ನು ಪೊಲೀಸ್ ವ್ಯಾನ್ ಬೆನ್ನತ್ತಿದೆ. ಈ ಸಂದರ್ಭದಲ್ಲಿ ವೇಗದ ಮೇಲೆ ನಿಯಂತ್ರಣ ಸಾಧಿಸಲಾಗಿದೆ ಎಂದು ಟ್ರಕ್ ಚಾಲಕ ವಿದ್ಯುತ್ ಕಂಬವೊಂದಕ್ಕೆ ಢಿಕ್ಕಿ ಹೊಡಿಸಿದ್ದಾನೆ. ಬಳಿಕ ಕಾಳು ರಾಮ್ ಎಂಬವರ ಗುಡಿಸಲಿಗೆ ನುಗ್ಗಿಸಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಮನೆಯಿಂದ ಹೊರಗಡೆ ಇದ್ದ ಕಾಳು ರಾಮ್ , ಆತನ ಮಗ ಹಾಗೂ ಸೊಸೆ ಮಾತ್ರ ಉಳಿದುಕೊಂಡಿದ್ದು, ಉಳಿದ ಏಳು ಮಂದಿ ಮೃತಪಟ್ಟಿದ್ದಾರೆ.
ಆದಾಗ್ಯೂ, ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು ಬರುವವರೆಗೂ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ನೀಡುವುದಿಲ್ಲ ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


