ಮುಸ್ಲಿಮರ ಧಾರ್ಮಿಕ ವಿಷಯದಲ್ಲಿ ಮಧ್ಯಪ್ರವೇಶಿಸಬೇಡಿ: ತಲಾಖ್ ಕುರಿತು ಕೇಂದ್ರಕ್ಕೆ ಮೆಹಬೂಬಾ ಮುಫ್ತಿ ಎಚ್ಚರಿಕೆ
ಮುಸ್ಲಿಮರ ಧಾರ್ಮಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ತ್ರಿವಳಿ ತಲಾಖ್ ಕುರಿತಾಗಿ ಮೆಹಬೂಬಾ ಮುಫ್ತಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Published On :
ಮುಸ್ಲಿಮರ ಧಾರ್ಮಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ತ್ರಿವಳಿ ತಲಾಖ್ ಕುರಿತಾಗಿ ಮೆಹಬೂಬಾ ಮುಫ್ತಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಮಂಡನೆಯಾಗುತ್ತಿದ್ದಂತೆಯೇ ಆಕ್ರೋಶಗೊಂಡಿರುವ ಮೆಹಬೂಬಾ ಮುಫ್ತಿ, ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, "ಓರ್ವ ಮುಸ್ಲಿಮ್ ಆಗಿದ್ದು, ಮುರಿದು ಬಿದ್ದ ವಿವಾಹದ ಪರಿಸ್ಥಿತಿಗಳನ್ನು ಎದುರಿಸಿರುವ ಮಹಿಳೆಯಾಗಿ, ಮುಸ್ಲಿಮರ ಕುಟುಂಬದ ರಚನೆಯ ಮೇಲೆ ಪ್ರಹಾರ ನಡೆಯುತ್ತಿದ್ದಾಗ ಮಾತನಾಡಬೇಕಾಗಿರುವುದು ನನ್ನ ಕರ್ತವ್ಯವಾಗಿದೆ ಎಂದು ಮುಫ್ತಿ ಹೇಳಿದ್ದಾರೆ.
ಮುಸ್ಲಿಮರಿಗೆ ತಮ್ಮ ಕುಟುಂಬ ರಚನೆಯಾಗಿರುವ ವಿಧಾನದ ಬಗ್ಗೆ ಹೆಮ್ಮೆ ಇದೆ. ಆದರೆ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ಮಸೂದೆ ಮೂಲಕ ಸಮುದಾಯವನ್ನು ಕದಡುವುದಕ್ಕೆ ಯತ್ನಿಸುತ್ತಿದೆ, ಇದರಿಂದ ಮಹಿಳೆಯರನ್ನು ಆರ್ಥಿಕವಾಗಿ ಸಂಕಷ್ಟಕ್ಕೆ ದೂಡಿದಂತಾಗುತ್ತದೆ, ಮುಸ್ಲಿಮರ ಧಾರ್ಮಿಕ ವಿಷಯದಲ್ಲಿ ಮಧ್ಯಪ್ರವೇಶಿಸಬೇಡಿ ಎಂದು ತಲಾಖ್ ಕುರಿತು ಮೆಹಬೂಬಾ ಮುಫ್ತಿ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Mehbooba Muftiಮೆಹಬೂಬಾ ಮುಫ್ತಿತ್ರಿವಳಿ ತಲಾಖ್triple talaq billMuslims\' religious affairsಮುಸ್ಲಿಂ ಧಾರ್ಮಿಕ ವಿಷಯ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


