ಮಹಿಳೆಯರ ಪ್ರವೇಶ, ಶಬರಿಮಲೆ ಉದ್ವಿಗ್ನ: ಹಲವಡೆ ಘರ್ಷಣೆ, ಪ್ರತಿಭಟನೆ ಹತ್ತಿಕ್ಕಲು ಸ್ಟನ್ ಗ್ರೆನೇಡ್, ಅಶ್ರುವಾಯು ಪ್ರಯೋಗ
50 ವರ್ಷದೊಳಗಿನ ಮಹಿಳೆಯರಿಬ್ಬರು ಶಬರಿಮಲೆ ಪ್ರವೇಶಿಸಿದ ಹಿನ್ನೆಲೆಯಲ್ಲಿ ಕೇರಳದ ಶಬರಿಮಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಎದುರಾಗಿದ್ದು, ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ಸ್ಟನ್ ಗ್ರೆನೇಡ್...

Published On :
ತಿರುವನಂತಪುರ: 50 ವರ್ಷದೊಳಗಿನ ಮಹಿಳೆಯರಿಬ್ಬರು ಶಬರಿಮಲೆ ಪ್ರವೇಶಿಸಿದ ಹಿನ್ನೆಲೆಯಲ್ಲಿ ಕೇರಳದ ಶಬರಿಮಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಎದುರಾಗಿದ್ದು, ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ಸ್ಟನ್ ಗ್ರೆನೇಡ್ (ಭಾರೀ ಸದ್ದು, ಮಿಂಚಿನಂತಹ ಬೆಳಕಿನೊಂದಿಗೆ ಸ್ಫೋಟಿಸುವ ಆದರೆ, ಯಾವುದೇ ಹಾನಿ ಎಸಗದ ಗುಂಡು), ಅಶ್ರುವಾಯು ಪ್ರಯೋಗಿಸಿದ್ದಾರೆಂದು ಬುಧವಾರ ತಿಳಿದುಬಂದಿದೆ.
ದೇಗುಲಕ್ಕೆ ಮಹಿಳೆಯರು ಪ್ರವೇಶಿಸಿದ್ದಕೆಕ ಅಯ್ಯಪ್ಪ ಭಕ್ತರು, ವಿವಿಧ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಹಲವೆಡೆ ಘರ್ಷಣೆಗಳು ಏರ್ಪಟ್ಟಿವೆ. ಈ ನಡುವೆ ಕೆಲ ಸಂಘಟನೆಗಳು ಗುರುವಾರ ರಾಜ್ಯ ಬಂದ್'ಗೆ ಕರೆ ನೀಡಿವೆ.
ಕೇರಳ ರಾಜಧಾನಿ ತಿರುವನಂತಪುರದಲ್ಲಿ ಬಿಜೆಪಿ ಹಾಗೂ ಸಿಪಿಎಂ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.
ಈ ನಡುವೆ ಹೇಳಿಗೆ ನೀಡಿರುವ ಸಿಪಿಐ ರಾಜ್ಯ ಕಾರ್ಯದರ್ಶಿ ಕೊಡಿಯೆರಿ ಬಾಲಕೃಷ್ಣನ್ ಅವರು, ದೇಗುಲದ ಬಾಗಿಲು ಮುಚ್ಚುವ ಮೂಲಕ ಅರ್ಚಕರು ಸಂವಿಧಾನ ಹಾಗೂ ಸುಪ್ರೀಂಕೋರ್ಟ್ ತೀರ್ಪವನ್ನು ಉಲ್ಲಂಘನೆ ಮಾಡಿದ್ದಾರೆಂದು ಹೇಳಿದ್ದಾರೆ.
ಮಹಿಳೆಯರಿಗೆ ಪ್ರವೇಶ ನೀಡಲು ಸರ್ಕಾರ ಹಾಗೂ ಪೊಲೀಸರು ಸಹಕಾರ ನೀಡಿರುವುದನ್ನು ಖಂಡಿಸಿ ಶಬರಿಮಲೆ ಕರ್ಮ ಸಮಿತಿ ಗುರುವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6ರವರೆಗೆ ಕೇರಳ ರಾಜ್ಯದಾದ್ಯಂತ ಹರತಾಳಕ್ಕೆ ಕರೆ ನೀಡಿದೆ. ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದಿದ್ದು, ಭಾರೀ ಪ್ರತಿಭಡಟನೆ ನಡೆಸುತ್ತಿದ್ದಾರೆ. ರಾಜ್ಯದೆಲ್ಲೆಡೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಇಂದು ಬೆಳಿಗಿನ ಜಾವ 3.45ರ ಸುಮಾರಿಗೆ ವಕೀಲೆ ಬಿಂದು ಹಾಗೂ ಸರ್ಕಾರಿ ಉದ್ಯೋಗಿಯಾಗಿರುವ ಕನಕದುರ್ಗಾ ಎನ್ನುವ ಇಬ್ಬರು 50 ವರ್ಷದ ಮಹಿಳೆಯರು ಶಬರಿಮಲೆ ಪ್ರವೇಶಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕೊಚ್ಚಿಶಬರಿಮಲೆClashSabarimalaಘರ್ಷಣೆKochiಅಯ್ಯಪ್ಪಸ್ವಾಮಿKerala policeLord Ayyappaಕೇರಳ ಪೊಲೀಸ್Karma Samithiಕರ್ಮಾ ಸಮಿತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


