ದೇಶ

ಹಿಂದೂಗಳು ರಾಮ ಮಂದಿರ ಕುರಿತು ನ್ಯಾಯಾಲಯದ ತೀರ್ಪಿಗೆ ಶಾಶ್ವತವಾಗಿ ಕಾಯಲಾಗದು: ವಿಹೆಚ್‏ಪಿ

ಅಯೋಧ್ಯೆ ರಾಮ ಮಂದಿರ ವಿವಾದ ಕುರಿತು ನ್ಯಾಯಾಲಯದ ಆದೇಶಕ್ಕಾಗಿ ಹಿಂದೂಗಳು ಶಾಶ್ವತವಾಗಿ ಕಾಯಲು ಸಾಧ್ಯವಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಬುಧವಾರ ಹೇಳಿದೆ...

ಹಿಂದೂಗಳು ರಾಮ ಮಂದಿರ ಕುರಿತು ನ್ಯಾಯಾಲಯದ ತೀರ್ಪಿಗೆ ಶಾಶ್ವತವಾಗಿ ಕಾಯಲಾಗದು: ವಿಹೆಚ್‏ಪಿ
ಸಂಗ್ರಹ ಚಿತ್ರ
Published On :
ನವದೆಹಲಿ: ಅಯೋಧ್ಯೆ ರಾಮ ಮಂದಿರ ವಿವಾದ ಕುರಿತು ನ್ಯಾಯಾಲಯದ ಆದೇಶಕ್ಕಾಗಿ ಹಿಂದೂಗಳು ಶಾಶ್ವತವಾಗಿ ಕಾಯಲು ಸಾಧ್ಯವಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಬುಧವಾರ ಹೇಳಿದೆ. 
ರಾಮ ಮಂದಿರ ವಿವಾದ ಕುರಿತಂತೆ ಈ ಹಿಂದೆ ಹೇಳಿಕೆ ನೀಡಿದ್ದ ಪ್ರಧಾನಿ ಮೋದಿಯವರು, ನ್ಯಾಯಾಲಯ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕವೇ ರಾಮ ಮಂದಿರ ನಿರ್ಮಾಣ ಕುರಿತ ಯಾವುದೇ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯ ಎಂದು ಹೇಳಿದ್ದರು. 
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ವಿಹೆಚ್'ಪಿ ಅಂತರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಅಲೋಕ್ ಕುಮಾರ್ ಅವರು, ಪ್ರಸ್ತುತ ಇರುವ ಎಲ್ಲಾ ರೀತಿಯ ಪರಿಸ್ಥಿತಿಗಳು ಹಾಗೂ ಹಿಂದೂಗಳ ದೃಷ್ಟಿಕೋನವನ್ನು ಪರಿಗಣಿಸಿದರೆ, ಮಂದಿರ ನಿರ್ಮಾಣ ಕುರಿತು ನ್ಯಾಯಾಲಯದ ಆದೇಶಕ್ಕಾಗಿ ಶಾಶ್ವತವಾಗಿ ಕಾಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 
ರಾಮ ಮಂದಿರ ನಿರ್ಮಾಣಕ್ಕೆ ಇರುವ ಒಂದೇ ಒಂದು ಸೂಕ್ತ ಮಾರ್ಗವೆಂದರೆ ಸುಗ್ರೀವಾಜ್ಞೆ ಹೊರಡಿಸುವುದು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.