ಮಧ್ಯಪ್ರದೇಶ: ಕಾಂಗ್ರೆಸ್ ಅಧಿಕಾರಕ್ಕೇರಿದ ಬೆನ್ನಲ್ಲೇ ಸಚಿವಾಲಯದಲ್ಲಿ 'ವಂದೇ ಮಾತರಂ' ಗೆ ಬ್ರೇಕ್!
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರುತ್ತಿದ್ದಂತೆಯೇ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದು, ಜನಸಾಮಾನ್ಯರ, ವಿಪಕ್ಷ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದೆ.

Published On :
ಭೋಪಾಲ್: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರುತ್ತಿದ್ದಂತೆಯೇ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದು, ಜನಸಾಮಾನ್ಯರ, ವಿಪಕ್ಷ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದೆ.
ಪ್ರತಿ ತಿಂಗಳ ಮೊದಲ ಕಾರ್ಯನಿರ್ವಹಣೆ ದಿನದಂದು ಸಚಿವಾಲಯಗಳಲ್ಲಿ ವಂದೇ ಮಾತರಂ ಹಾಡಲಾಗುತ್ತಿತ್ತು. ಇದು ಬಿಜೆಪಿ ಸರ್ಕಾರದ ಅವಧಿಯಿಂದಲೂ ನಡೆದುಕೊಂಡು ಬಂದ ಸಂಪ್ರದಾಯವಾಗಿತ್ತು. ಆದರೆ ಸಚಿವಾಲಯದಲ್ಲಿ ರಾಷ್ಟ್ರೀಯ ಗೀತೆಯಾಗಿರುವ ವಂದೇ ಮಾತರಂ ಹಾಡುವುದಕ್ಕೆ ಈಗಿನ ಕಾಂಗ್ರೆಸ್ ಸರ್ಕಾರ ಬ್ರೇಕ್ ಹಾಕಿದ್ದು ಸ್ವತಃ ಮುಖ್ಯಮಂತ್ರಿ ಕಮಲ್ ನಾಥ್ ಈ ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ವಂದೇ ಮಾತರಂ ಕೇವಲ ರಾಷ್ಟ್ರೀಯ ಗೀತೆಯಲ್ಲ, ಅದು ದೇಶಭಕ್ತಿಯ ಸಮಾನಾರ್ಥ, ಕೂಡಲೇ ಕಾಂಗ್ರೆಸ್ ವಂದೇ ಮಾತರಂ ಹಾಡುವುದನ್ನು ಮತ್ತೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ನಡೆಯನ್ನು ವಿರೋಧಿಸಿ ಸಚಿವಾಲಯದಲ್ಲಿ ತಾವು ಜ.06 ರಂದು ವಂದೇ ಮಾತರಂ ಹಾಡುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


