ಮೇಕೆದಾಟು: ಲೋಕಸಭೆಯಲ್ಲಿ ಎಐಎಡಿಎಂಕೆ ಪುಂಡಾಟ, 26 ಸಂಸದರ ಅಮಾನತು!
ಮೇಕೆದಾಟು ಯೋಜನೆಯನ್ನು ವಿರೋಧಿಸಿ ಎಐಎಡಿಎಂಕೆ ಸದಸ್ಯರು ಲೋಕಸಭೆಯಲ್ಲಿ ಪುಂಡಾಟ ನಡೆಸಿದ್ದು ಇದರಿಂದ ಕೆರಳಿದ ಸ್ಪಿಕರ್ ಸುಮಿತ್ರಾ ಮಹಾಜನ್ ಅವರು 26 ಸಂಸದರನ್ನು ಅಮಾನತು...

Published On :
ನವದೆಹಲಿ: ಮೇಕೆದಾಟು ಯೋಜನೆಯನ್ನು ವಿರೋಧಿಸಿ ಎಐಎಡಿಎಂಕೆ ಸದಸ್ಯರು ಲೋಕಸಭೆಯಲ್ಲಿ ಪುಂಡಾಟ ನಡೆಸಿದ್ದು ಇದರಿಂದ ಕೆರಳಿದ ಸ್ಪಿಕರ್ ಸುಮಿತ್ರಾ ಮಹಾಜನ್ ಅವರು 26 ಸಂಸದರನ್ನು ಅಮಾನತು ಮಾಡಿದ್ದಾರೆ.
ಮೇಕೆದಾಟುವಿನಲ್ಲಿ ಜಲಾಶಯ ನಿರ್ಮಾಣಕ್ಕೆ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿತ್ತು. ಇದನ್ನು ಸಹಿಸದ ತಮಿಳುನಾಡು ಸರ್ಕಾರ ಕ್ಯಾತೆ ತೆಗೆಯುತ್ತಿತ್ತು. ಇಂದು ನಡೆದ ಲೋಕಸಭೆ ಕಲಾಪದ ಸಮಯದಲ್ಲಿ ಎಐಎಡಿಎಂಕೆ ಪಕ್ಷದ 26 ಸಂಸದರು ಗಲಾಟೆ ಮಾಡಿದ್ದರು. ಈ ವೇಳೆ ಸ್ಪಿಕರ್ ಸುಮಿತ್ರ ಮಹಾಜನ್ ಅವರು ಸಂಸತ್ ಕಲಾಪಕ್ಕೆ ಅಡ್ಡಿ ಪಡಿಸಿದ ಆರೋಪದ ಹಿನ್ನೆಲೆಯಲ್ಲಿ 26 ಸಂಸದರನ್ನು ಅಮಾನತು ಮಾಡಿದ್ದಾರೆ.
ಸ್ಪಿಕರ್ ಅವರು ಎಐಎಡಿಎಂಕೆ 26 ಸಂಸದರನ್ನು ಮುಂದಿನ 5 ಕಲಾಪಗಳಿಗೆ ಹಾಜರಾಗದಂತೆ ಅಮಾನತು ಮಾಡಿದ್ದಾರೆ. ಇನ್ನು ಎಐಎಡಿಎಂಕೆ ಸಂಸದರನ್ನು ಅಮಾನತು ಮಾಡಿರುವುದಕ್ಕೆ ಪ್ರತಿಕ್ರಿಯಿಸಿರುವ ಎಐಎಡಿಎಂಕೆ ಸಂಸದ ಮತ್ತು ಲೋಕಸಭೆ ಡೆಪ್ಯುಟಿ ಸ್ಪಿಕರ್ ಎಂ ತಂಬಿದೊರೈ ಅವರು, ಸದ್ಯದಲ್ಲೇ ಲೋಕಸಭೆ ಚುನಾವಣೆ ಬರುತ್ತಿದ್ದು ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಸಲುವಾಗಿ ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಈ ಯೋಜನೆಗೆ ವಿರೋಧ ವ್ಯಕ್ತಪಡಿಸಿ ನಾವು ಪ್ರತಿಭಟನೆಗಳನ್ನು ನಡೆಸುತ್ತಿದ್ದೇವೆ. ಪ್ರತಿಭಟನೆಯು ನಮ್ಮ ಪ್ರಜಾಪ್ರಭುತ್ವ ಹಕ್ಕು. ಆದರೆ ಕೇಂದ್ರ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬರುತ್ತಿಲ್ಲ ಎಂದು ತಂಬಿದೊರೈ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Lok SabhaಲೋಕಸಭೆMekedatu dam projectಮೇಕೆದಾಟು ಯೋಜನೆSumitra Mahajanಸುಮಿತ್ರಾ ಮಹಾಜನ್AIADMK MPಎಐಎಡಿಎಂಕೆ ಸಂಸದರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


