ಶಬರಿಮಲೆ ವಿವಾದ: ದೇವಾಲಯದ ಸಂಪ್ರದಾಯಕ್ಕೆ ಬೆಲೆ ಕೊಡಿ, ಹಿಂದೂ ಧರ್ಮ ರಕ್ಷಿಸಿ- ನಟಿ ಶ್ರೀರೆಡ್ಡಿ
ಶಬರಿಮಲೆಗೆ ಇಬ್ಬರು ಮಹಿಳೆಯರು ಪ್ರವೇಶಿಸಿದ್ದು, ದೇಶಾದ್ಯಂತ ಈ ಬಗ್ಗೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಟಾಲಿವುಡ್ ನಟಿ ಶ್ರೀ ರೆಡ್ಡಿ ಸಹ ಪ್ರತಿಕ್ರಿಯೆ ನೀಡಿದ್ದಾರೆ.

Published On :
ಶಬರಿಮಲೆಗೆ ಇಬ್ಬರು ಮಹಿಳೆಯರು ಪ್ರವೇಶಿಸಿದ್ದು, ದೇಶಾದ್ಯಂತ ಈ ಬಗ್ಗೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಟಾಲಿವುಡ್ ನಟಿ ಶ್ರೀ ರೆಡ್ಡಿ ಸಹ ಪ್ರತಿಕ್ರಿಯೆ ನೀಡಿದ್ದಾರೆ.
ವಿವಾದದ ಬಗ್ಗೆ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಶ್ರೀರೆಡ್ಡಿ, ಮಹಿಳೆಯರು ದೇವಾಲಯ ಪ್ರವೇಶಿಸುತ್ತಿರುವ ವಿಡಿಯೋವನ್ನು ಅಪ್ ಲೋಡ್ ಮಾಡಿದ್ದಾರೆ. "ನಾನು ಹೆಣ್ಣುಮಕ್ಕಳನ್ನು ಗೌರವಿಸುತ್ತೇನೆ, ಏಕೆಂದರೆ ಅವರು ಕೆಲವು ಮೌಲ್ಯಗಳನ್ನು ಹೊಂದಿರುತ್ತಾರೆ. ಆದ್ದರಿಂದ ದೇವಾಲಯದ ಸಂಪ್ರದಾಯಗಳಿಗೂ ಬೆಲೆ ನೀಡಿ, ಹಿಂದೂ ಧರ್ಮವನ್ನು ರಕ್ಷಿಸಿ, ಅಯ್ಯಪ್ಪ ದೇವರು, ಧಾರ್ಮಿಕ ಮೌಲ್ಯಗಳನ್ನು ಗೌರವಿಸಬೇಕೆಂಬುದು ನನ್ನ ನಂಬಿಕೆ, ದೇವರಿಗೆ ಅಪಚಾರವೆಸಗಿದರೆ ಅದು ಹೆಣ್ಣುಮಕ್ಕಳ ಭವಿಷ್ಯಕ್ಕೆ ಮಾರಕವಾಗಬಹುದು ಎಂದು ನಟಿ ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


