ಚುನಾವಣೆಯಲ್ಲಿ ಬಿಜೆಪಿ ಕಳಪೆ ಪ್ರದರ್ಶನ, ನೋಟಾ ವಿರುದ್ಧ ಎಬಿವಿಪಿಯಿಂದ ಪ್ರಚಾರಂದೋಲನ
ಮೂರು ರಾಜ್ಯಗಳಲ್ಲಿ ಬಿಜೆಪಿ ಕಳಪೆ ಪ್ರದರ್ಶನ ನಂತರ ಲೋಕಸಭಾ ಚುನಾವಣೆಗೂ ಮುಂಚಿತವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿಯಿಂದ ದೇಶಾದ್ಯಂತ ನೋಟಾ ವಿರುದ್ಧ ಆಂದೋಲನಾ ನಡೆಸಲು ನಿರ್ಧರಿಸಲಾಗಿದೆ.

ನವದೆಹಲಿ: ಇತ್ತೀಚಿಗೆ ನಡೆದ ಮೂರು ರಾಜ್ಯಗಳಲ್ಲಿ ಬಿಜೆಪಿ ಕಳಪೆ ಪ್ರದರ್ಶನ ನಂತರ ಲೋಕಸಭಾ ಚುನಾವಣೆಗೂ ಮುಂಚಿತವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿಯಿಂದ ದೇಶಾದ್ಯಂತ ನೋಟಾ ವಿರುದ್ಧ ಆಂದೋಲನಾ ನಡೆಸಲು ನಿರ್ಧರಿಸಲಾಗಿದೆ.
ಚುನಾವಣೆಗೆ ಸ್ಪರ್ಧಿಸಿರುವ ಯಾವುದೇ ಅಭ್ಯರ್ಥಿಗೆ ಮತ ನೀಡಲು ಇಷ್ಟವಿಲ್ಲದಿದ್ದರೆ ನೋಟಾಗೆ ಮತ ಚಲಾಯಿಸಲು ಅವಕಾಶ ಇದೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನೋಟಾಗೆ ಮತ ಚಲಾಯಿಸುವ ಬದಲು ಯಾರಾದರೂ ಒಬ್ಬ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಜನರಲ್ಲಿ ಮನವಿ ಮಾಡಿಕೊಳ್ಳಲಾಗುವುದು ಎಂದು ಎಬಿವಿಪಿ ರಾಷ್ಟ್ರೀಯ ಕಾರ್ಯದರ್ಶಿ ಹೇಮ ಠಾಕೂರ್ ತಿಳಿಸಿದ್ದಾರೆ.
ಮೂರು ರಾಜ್ಯಗಳಲ್ಲಿ ಬಿಜೆಪಿ ಪ್ರದರ್ಶನ ಹಿನ್ನೆಲೆಯಲ್ಲಿ ಈ ರೀತಿಯ ನಿರ್ಣಯ ಕೈಗೊಳ್ಳಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಹೇಮ ಠಾಕೂರ್, ಎಬಿವಿಪಿಯ ' ರಾಷ್ಟ್ರ ಮೊದಲು, ಕಡ್ಡಾಯ ಮತದಾನ 'ಘೋಷಣೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜನರು ತಮ್ಮ ಹಕ್ಕು ಚಲಾಯಿಸುವಂತೆ ಅರಿವು ಮೂಡಿಸಲಾಗುತ್ತದೆ ಎಂದು ಹೇಳಿದರು.
ಇತ್ತೀಚಿಗೆ ನಡೆದ ರಾಜಸ್ತಾನ, ಮಧ್ಯಪ್ರದೇಶ ಚುನಾವಣೆಯಲ್ಲಿ ನೋಟಾದಿಂದ ಬಿಜೆಪಿ ಗೆಲುವಿನ ಅಂತರ ಕಡಿಮೆಯಾಯಿತು ಎಂಬ ಮಾತುಗಳು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಈ ರೀತಿ ನೋಟಾ ವಿರುದ್ಧ ದೇಶಾದ್ಯಂತ ಆಂದೋಲನ ರೂಪಿಸುತ್ತದೆ ಎನ್ನಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


