ದೇಶ

ಶ್ರೀರಾಮ ಇಡೀ ಜಗತ್ತಿಗೇ ಸೇರಿದವನು, ಕೇವಲ ಹಿಂದೂಗಳಿಗೆ ಮಾತ್ರವಲ್ಲ: ಫಾರೂಕ್‌ ಅಬ್ದುಲ್ಲಾ

ಶ್ರೀರಾಮ ಹಿಂದೂಗಳಿಗೆ ಮಾತ್ರ ಸೇರಿದವನಲ್ಲ, ಆತ ಇಡೀ ಜಗತ್ತಿಗೇ ಸೇರಿದವನು. ಅಯೋಧ್ಯೆ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಬೇಕಾಗಿದೆ ಎಂದು ,...

ಶ್ರೀರಾಮ ಇಡೀ ಜಗತ್ತಿಗೇ ಸೇರಿದವನು, ಕೇವಲ ಹಿಂದೂಗಳಿಗೆ ಮಾತ್ರವಲ್ಲ: ಫಾರೂಕ್‌ ಅಬ್ದುಲ್ಲಾ
ಫಾರೂಕ್‌ ಅಬ್ದುಲ್ಲಾ
Published On :
ನವದೆಹಲಿ: ಶ್ರೀರಾಮ ಹಿಂದೂಗಳಿಗೆ ಮಾತ್ರ ಸೇರಿದವನಲ್ಲ, ಆತ ಇಡೀ  ಜಗತ್ತಿಗೇ ಸೇರಿದವನು. ಅಯೋಧ್ಯೆ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಬೇಕಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಹೇಳಿದ್ದಾರೆ.
ಆಯೋಧ್ಯೆಯಲ್ಲಿನ ಭೂ ಒಡೆತನ ಯಾರಿಗೆ ಸೇರಿದ್ದು ಎಂಬ ಪ್ರಕರಣದ ವಿಚಾರಣೆ ದಿನಾಂಕವನ್ನು ಇದೇ ಜನವರಿ 10ರಂದು ಪ್ರಕಟಿಸಿ ಆದೇಶ ಹೊರಡಿಸುವುದಾಗಿ ಸುಪ್ರೀಂ ಕೋರ್ಟ್‌ ಹೇಳಿದ ಬೆನ್ನಲ್ಲೇ  ಫಾರೂಕ್ ಈ ಹೇಳಿಕೆ ನೀಡಿದ್ದಾರೆಯ
ಪ್ರಕರಣವನ್ನು ನ್ಯಾಯಾಲಯಕ್ಕೆ ತೆಗೆದುಕೊಂಡು ಹೋಗಬಾರದು. ಈ ವಿಚಾರವನ್ನು ಜನರು ಮೇಜಿನ ಚರ್ಚೆ ಮಾಡುವ ಮೂಲಕ ಬಗೆಹರಿಸಬೇಕಾಗಿದೆ.ಯಾಕೆ ಈ ವಿಚಾರವನ್ನು ಕೋರ್ಟ್‌ಗೆ ಎಳೆದೊಯ್ಯುವುದು? ಈ ವಿಚಾರ ಮಾತುಕತೆಯ ಮೂಲಕ ಬಗೆ ಹರಿಯುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದರು. ಯಾವ ದಿನ ಈ ವಿಚಾರ ಬಗೆಹರಿಯುತ್ತದೋ ಆ ದಿನ ನಾನು ಮಂದಿರಕ್ಕಾಗಿ ಇಟ್ಟಿಗೆ ಹಾಕಲು ತೆರಳುತ್ತೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.