'ನೀವು ಗಂಡಸರೇ ಆಗಿದ್ರೆ ಮುಟ್ರೋ ಬಸ್ಸನ್ನು'; ಶಬರಿಮಲೆ ಪ್ರತಿಭಟನಾಕಾರರಿಗೆ ಪೊಲೀಸ್ ಅವಾಜ್, ವಿಡಿಯೋ ವೈರಲ್!
ಶಬರಿಮಲೆಗೆ ಮಹಿಳೆಯರು ಪ್ರವೇಶಿಸಿರುವುದನ್ನು ಖಂಡಿಸಿ ಕೇರಳದಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿದ್ದು ಬಸ್ ತಡೆದ ಪ್ರತಿಭಟನಾಕಾರರಿಗೆ ಪೊಲೀಸ್ ಆವಾಜ್ ಹಾಕಿರುವ ವಿಡಿಯೋ...

Published On :
ಕನ್ಯಾಕುಮಾರಿ: ಶಬರಿಮಲೆಗೆ ಮಹಿಳೆಯರು ಪ್ರವೇಶಿಸಿರುವುದನ್ನು ಖಂಡಿಸಿ ಕೇರಳದಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿದ್ದು ಬಸ್ ತಡೆದ ಪ್ರತಿಭಟನಾಕಾರರಿಗೆ ಪೊಲೀಸ್ ಆವಾಜ್ ಹಾಕಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ತಮಿಳುನಾಡು-ಕೇರಳ ಗಡಿಯಲ್ಲಿರುವ ಕಲಿಯಕ್ಕವಿಲ್ಲೈನಲ್ಲಿ ಸಹ ಪ್ರತಿಭಟನೆಯ ಕಾವು ಜೋರಾಗಿತ್ತು. ಈ ವೇಳೆ ಪ್ರತಿಭಟನಕಾರರು ಬಸ್ ಅನ್ನು ತಡೆದ ಡ್ರೈವರ್ ಅನ್ನು ಕೆಳಗಿಳಿಯುವಂತೆ ಒತ್ತಾಯಿಸುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಸಬ್ ಇನ್ಸ್ ಪೆಕ್ಟರ್ ಮೋಹನ್ ಅಯ್ಯರ್ ಪ್ರತಿಭಟನಕಾರರಿಗೆ ನೀವು ಗಂಡಸರೇ ಆಗಿದ್ರೆ ಬಸ್ ಅನ್ನು ಮುಟ್ಟಿ ಎಂದು ಆವಾಜ್ ಹಾಕಿದ್ದಾರೆ.
ಪೊಲೀಸ್ ರೋಷಾವೇಶ ಕಂಡ ಪ್ರತಿಭಟನಾಕಾರರ ಧೈರ್ಯವೆಲ್ಲ ಉಡುಗಿ ಹೋಗಿತ್ತು. ಅವರೆಲ್ಲ ಸ್ಥಳದಿಂದ ಕಾಲ್ಕಿತ್ತರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅನೇಕರು ಈ ಪೊಲೀಸ್ ಅಧಿಕಾರಿಯನ್ನು ನಿಜ ಜೀವನದ ಸಿಂಗಂ, ಸಿಂಬಾ ಎಂದು ಕೊಂಡಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ತಮಿಳುನಾಡುಪೊಲೀಸ್Attack BusTamil Nadu policeಶಬರಿಮಲೆ ವಿವಾದSabarimala RowKerala Hartalಬಸ್ ಹಲ್ಲೆಕೇರಳ ಪ್ರತಿಭಟನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


