ದೇಶ

ತಮಿಳುನಾಡಿನಲ್ಲಿ ಭೀಕರ ಅಪಘಾತ: ತೆಲಂಗಾಣದ 10 ಶಬರಿಮಲೆ ಯಾತ್ರಿಗಳು ಸಾವು

ತಮಿಳುನಾಡಿನ ಪುದುಕೋಟ್ಟೈ ಜಿಲ್ಲೆಯ ತಿರುಮಯಂ ಬಳಿ ಭಾನುವಾರ ಭೀಕರ ಅಪಘಾತ ಸಂಭವಿಸಿದ್ದು...

ತಮಿಳುನಾಡಿನಲ್ಲಿ ಭೀಕರ ಅಪಘಾತ: ತೆಲಂಗಾಣದ 10 ಶಬರಿಮಲೆ ಯಾತ್ರಿಗಳು ಸಾವು
ಅಪಘಾತಕ್ಕಿಡಾದ ವ್ಯಾನ್
Published On :
ಪುದುಕೋಟ್ಟೈ: ತಮಿಳುನಾಡಿನ ಪುದುಕೋಟ್ಟೈ ಜಿಲ್ಲೆಯ ತಿರುಮಯಂ ಬಳಿ ಭಾನುವಾರ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಒಂಬತ್ತು ಶಬರಿಮಲೆ ಯಾತ್ರಿಗಳು ಹಾಗೂ ವ್ಯಾನ್ ಚಾಲಕ ಮೃತಪಟ್ಟಿದ್ದಾರೆ.
ತೆಲಂಗಾಣದ ಯಾತ್ರಿಗಳು ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಪಡೆದು, ರಾಮೇಶ್ವರಂಗೆ ಭೇಟಿ ನೀಡಿ ವಾಪಸ್ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಇಂದು ಮಧ್ಯಾಹ್ನ ಅಯ್ಯಪ್ಪ ಭಕ್ತರು ಪ್ರಯಾಣಿಸುತ್ತಿದ್ದ ವ್ಯಾನ್ ಗೆ ಎದುರಿನಿಂದ ಬಂದ ಟ್ರೇಲರ್ ಲಾರಿಯೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಪುದುಕೋಟ್ಟೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ಲಾರಿ ಚಾಲಕ, ಲಾರಿಯನ್ನು ಸ್ಥಳದಲ್ಲಿ ಬಿಟ್ಟು, ಪರಾರಿಯಾಗಿದ್ದಾನೆ.
ಪುದುಕೋಟ್ಟೈ ಜಿಲ್ಲಾಧಿಕಾರಿ ಎಸ್.ಗಣೇಶ್, ಎಸ್ ಪಿ ಸೆಲ್ವರಾಜ್ ಅಪಘಾತ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ತಿರುಮಯಂ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.