ದೇಶ

ಗೋವಾ ಸಿಎಂ ಪರಿಕ್ಕರ್'ಗೆ ಪ್ರಾಣಾಪಾಯ: ಭದ್ರತೆ ಕೋರಿ ರಾಷ್ಟ್ರಪತಿಗೆ ಕಾಂಗ್ರೆಸ್ ಪತ್ರ

ಗೋವಾ ಮುಖ್ಯಮಂತ್ರಿ ಹಾಗೂ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಮನೆಯ ಶಯನಗೃಹದಲ್ಲಿ ರಫೇಲ್ ಯುದ್ಧ ವಿಮಾನ ಖರೀದಿ ಕುರಿತ ರಹಸ್ಯ ಕಡತಗಳು ಇರಬಹುದಾದ ಹಿನ್ನೆಲೆಯಲ್ಲಿ ಅವರ ಜೀವಕ್ಕೆ ಅಪಾಯವಿದ್ದು...

ಗೋವಾ ಸಿಎಂ ಪರಿಕ್ಕರ್'ಗೆ ಪ್ರಾಣಾಪಾಯ: ಭದ್ರತೆ ಕೋರಿ ರಾಷ್ಟ್ರಪತಿಗೆ ಕಾಂಗ್ರೆಸ್ ಪತ್ರ
ಗೋವಾ ಮುಖ್ಯಮಂತ್ರಿ ಹಾಗೂ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್
Published On :
ಪಣಜಿ: ಗೋವಾ ಮುಖ್ಯಮಂತ್ರಿ ಹಾಗೂ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಮನೆಯ ಶಯನಗೃಹದಲ್ಲಿ ರಫೇಲ್ ಯುದ್ಧ ವಿಮಾನ ಖರೀದಿ ಕುರಿತ ರಹಸ್ಯ ಕಡತಗಳು ಇರಬಹುದಾದ ಹಿನ್ನೆಲೆಯಲ್ಲಿ ಅವರ ಜೀವಕ್ಕೆ ಅಪಾಯವಿದ್ದು, ಅವರಿಗೆ ಭದ್ರತೆ ಹೆಚ್ಚಿಸಬೇಕೆಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಕಾಂಗ್ರೆಸ್ ಪತ್ರ ಬರೆದಿದೆ. 
ಗೋವಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಿರೀಶ್ ಛೋಡಂಕರ್ ಅವರು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದು, ರಫೇಲ್ ಕಡತಗಳನ್ನು ಪರಿಕ್ಕರ್ ಮನೆಯಿಂದ ಹೊತ್ತೊಯ್ಯಲು ಯತ್ನಗಳು ನಡೆಯುವ ಸಾಧ್ಯತೆಗಳಿದ್ದು. ಇದರಿಂದಾಗಿ ಪರಿಕ್ಕರ್ ಅವರ ಜೀವಕ್ಕೆ ಅಪಾಯವಿದೆ. ಭ್ರಷ್ಟಾಚಾರ ಮುಚ್ಚಿಹಾಕಲು ಇಂತಹ ಯತ್ನಗಳು ನಡೆಯಬಹುದು ಎಂದು ತಿಳಿಸಿದ್ದಾರೆ. 
ಇತ್ತೀಚೆಗೆ ಗೋವಾ ಸಚಿವ ವಿಶ್ವಜಿತ್ ರಾಣೆ ಅವರ ರೀತಿ ಧ್ವನಿಯಿದ್ದ ಆಡಿಯೋ ಟೇಪ್ ವೊಂದನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು. ಅದರಲ್ಲಿ ರಾಣೆ, ತಮ್ಮ ಬೆಡ್ ರೂಮಲ್ಲಿ ರಫೇಲ್ ಕಡತಗಳಿವೆ ಎಂದು ಪರಿಕ್ಕರ್ ಸಂಪುಟ ಸಭೆಯಲ್ಲಿ ಹೇಳಿದ್ದರು ಎಂದು ಪತ್ರಕರ್ತರೊಬ್ಬರ ಎದುರು ಹೇಳುವ ಅಂಶವಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.