ಹತಾಶೆಯಿಂದ ಮೋದಿ ನನ್ನನ್ನು ಟಾರ್ಗೆಟ್: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು
ಪ್ರಧಾನಿ ನರೇಂದ್ರ ಮೋದಿ ಹತಾಶೆಯಿಂದ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಅಮರಾವತಿ: ಪ್ರಧಾನಿ ನರೇಂದ್ರ ಮೋದಿ ಹತಾಶೆಯಿಂದ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಮಗನನ್ನು ರಾಜಕೀಯಕ್ಕೆ ಕರೆತರಲಾಗುತ್ತಿದೆ ಎಂಬರ್ಥದಲ್ಲಿ ಪ್ರಧಾನಿ ಮೋದಿ ನಿನ್ನೆ ನೀಡಿದ ಸನ್ ರೈಸ್ ಹೇಳಿಕೆ ವಿರುದ್ಧ ಚಂದ್ರಬಾಬು ನಾಯ್ಡು ವಾಗ್ದಾಳಿ ನಡೆಸಿದ್ದಾರೆ
ಆಂಧ್ರಪ್ರದೇಶ ಆಡಳಿತದಲ್ಲಿ ಚಂದ್ರಬಾಬು ನಾಯ್ಡು ಅವರ ಮಗ ನಾರಾ ಲೋಕೇಶ್ ಅವರನ್ನು ಬೆಳೆಸಲು ನಾಯ್ಡು ಪ್ರಯತ್ನಿಸುತ್ತಿದ್ದಾರೆ ಎಂಬುದಕ್ಕೆ ಸನ್ ರೈಸ್ ಎಪಿ ಎಂಬ ಟ್ಯಾಗ್ ಲೈನ್ ಬಳಸಿ ಪ್ರಧಾನಿ ಮೋದಿ ನಿನ್ನೆ ಲೇವಡಿ ಮಾಡಿದ್ದರು.
ಆಂಧ್ರಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವವರು ತೆಲುಗು ಜನರ ಹಿತಾಸಕ್ತಿಯನ್ನು ನಿರ್ಲಕ್ಷಿಸಿ ಅಧಿಕಾರ ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ. ತೆಲುಗು ದೇಶಂ ಸ್ಥಾಪಕ ಎನ್ ಟಿಆರ್ ಅವರಿಗೆ ಮೋಸ ಮಾಡಲಾಗಿದೆ ಎಂದು ಮೋದಿ ಐದು ಲೋಕಸಭಾ ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಹೇಳಿಕೆ ನೀಡಿದ್ದರು.
ಮೋದಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶದ ಬೆಳವಣಿಗೆ ಬಗ್ಗೆ ಮೋದಿಗೆ ಹೊಟ್ಟೆ ಕಿಚ್ಚು, ಹತಾಸೆಯಿಂದಾಗಿ ಈ ರೀತಿಯಲ್ಲಿ ಮಾತನಾಡುತ್ತಿದ್ದಾರೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


