ತಮಿಳುನಾಡು ಕ್ರೀಡಾ ಸಚಿವ ಬಾಲಕೃಷ್ಣ ರೆಡ್ಡಿಗೆ 3 ವರ್ಷ ಜೈಲು
1988ರ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಯುವಜನ ಕಲ್ಯಾಣ ಮತ್ತು ಕ್ರೀಡಾ ಸಚಿವ...

Published On :
ಚೆನ್ನೈ: 1988ರ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಯುವಜನ ಕಲ್ಯಾಣ ಮತ್ತು ಕ್ರೀಡಾ ಸಚಿವ ಬಾಲಕೃಷ್ಣ ರೆಡ್ಡಿ ಅವರಿಗೆ ವಿಶೇಷ ಕೋರ್ಟ್ ಸೋಮವಾರ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಶಾಸಕ ಹಾಗೂ ಸಂಸದರ ವಿರುದ್ಧದ ಪ್ರಕರಣಗಳ ವಿಶೇಷ ಕೋರ್ಟ್ ನ್ಯಾಯಾಧೀಶೆ ಜೆ ಶಾಂತಿ ಅವರು, ಕ್ರೀಡಾ ಸಚಿವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.
ಬಾಲಕೃಷ್ಣ ರೆಡ್ಡಿ ಅವರು ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವುದರಿಂದ ಅವರು ಶಾಸಕತ್ವದಿಂದ ಅನರ್ಹಗೊಳ್ಳಲಿದ್ದು, ಸಚಿವ ಸ್ಥಾನ ಕಳೆದುಕೊಳ್ಳಲಿದ್ದಾರೆ.
1998 ರಲ್ಲಿ ಎಐಎಡಿಎಂಕೆ ಪಕ್ಷ ಕೈಗೊಂಡಿದ್ದ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆದಿತ್ತು. ಈ ವೇಳೆ ಸಾರ್ವಜನಿಕ ಆಸ್ತಿ, ಪಾಸ್ತಿಗೆ ಹಾನಿ ಮಾಡಿರುವ ಸಂಬಂಧ ಬಾಲಕೃಷ್ಣ ರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದರ ವಿಚಾರಣೆ ನಡೆಸಿದ ಕೋರ್ಟ್, ಇಂದು ತೀರ್ಪು ನೀಡಿದೆ.
ಪ್ರತಿಭಟನೆ ವೇಳೆ ಬಾಲಕೃಷ್ಣ ರೆಡ್ಡಿ ಅಪರಾಧ ಚಟುವಟಿಕೆಯಲ್ಲಿ ತೊಡಗಿರೋದು ಸಾಬೀತಾದ ಹಿನ್ನೆಲೆಯಲ್ಲಿ ಮೂರು ವರ್ಷ ಜೈಲು ಶಿಕ್ಷೆ ಹಾಗೂ ₹10,500 ದಂಡ ವಿಧಿಸಿದೆ.
ಬಾಲಕೃಷ್ಣ ಅವರು ಕೋರ್ಟ್ ತೀರ್ಪು ಪ್ರಶ್ನಿಸಿ ನಾಳೆ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಲಿದ್ದಾರೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


